ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ

Last Updated 9 ಫೆಬ್ರುವರಿ 2022, 9:46 IST
ಅಕ್ಷರ ಗಾತ್ರ

ಬಾಲ್ಲಿಯ (ಉತ್ತರ ಪ್ರದೇಶ): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಮತ್ತು ಕೋವಿಡ್ ನಿರ್ಬಂಧಗಳನ್ನು ಪಾಲಿಸದೇ ಇರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟಿರುವುದಕ್ಕೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸುರೆಂದ್ರ ಸಿಂಗ್ ರಾಜೀನಾಮೆ ನೀಡಿದ್ದಾರೆ.

ಅದಾದ ಬಳಿಕ, ಬೈರಿಯಾದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲು ಅವರು ಮಂಗಳವಾರ ತೆರಳಿದ್ದರು.

ಈ ಸಂದರ್ಭದಲ್ಲಿ ಸುಮಾರು ಸಾವಿರ ಜನರು ಸಭೆ ಸೇರಿ, ಚುನಾವಣಾ ನೀತಿ ಸಂಹಿತೆ ಮತ್ತು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಾಸಕ ಸಿಂಗ್ ಸಹಿತ ಆರು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT