ಬುಧವಾರ, ಡಿಸೆಂಬರ್ 8, 2021
23 °C

ಪಶ್ಚಿಮ ಬಂಗಾಳ: ರಾಯ್‌ಗಂಜ್‌ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಟಿಎಂಸಿಗೆ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ರಾಯ್‌ಗಂಜ್‌ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಅವರು ಬುಧವಾರ ತೃಣಮೂಲ ಕಾಂಗ್ರೆಸ್‌ ಸೇರ್ಪಡೆಗೊಂಡರು.

ಕಲ್ಯಾಣಿ ಅವರು ಟಿಎಂಸಿ ಸೇರುತ್ತಿರುವ ಐದನೇ ಬಿಜೆಪಿ ಶಾಸಕರಾಗಿದ್ದಾರೆ. ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ. 

ಟಿಎಂಸಿಯ ಮಾಜಿ ಉತ್ತರ ದಿನಾಜ್‌ಪುರ ಜಿಲ್ಲಾ ಅಧ್ಯಕ್ಷರಾಗಿದ್ದ ಕಲ್ಯಾಣಿ ಅವರು ಕಳೆದ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರಿ ರಾಯ್‌ಗಂಜ್‌ನಿಂದ ಸ್ಪರ್ಧಿಸಿದ್ದರು. 

ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ರಾಜ್ಯ ಸಚಿವ ಪಾರ್ಥ ಚಟರ್ಜಿ ಅವರು ಕಲ್ಯಾಣಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. 

‘ಯಾವುದೇ ಸ್ವಾಭಿಮಾನಿ ವ್ಯಕ್ತಿ ಬಿಜೆಪಿಯಲ್ಲಿ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದು ಕಲ್ಯಾಣಿ ಅವರು ಇಲ್ಲಿಯ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.  

ಏರುತ್ತಿರುವ ತೈಲ ಬೆಲೆಯನ್ನು ಪರಿಶೀಲಿಸಲು ಒಂದೇ ಒಂದು ಹೆಜ್ಜೆಯನ್ನು ಮುಂದಿಡದ ಕೇಂದ್ರದ ಜನ ವಿರೋಧಿ ನೀತಿಯಿಂದ ತಾನು ಅಸಮಾಧಾನಗೊಂಡಿದ್ದೇನೆ ಎಂದು ಅವರು ಹೇಳಿದರು. 

‘ಶಾಸಕರಾಗಿ ಯಾರಾದರೂ ಉತ್ತಮ ಕೆಲಸ ಮಾಡಲು ಬಯಸಿದರೆ ಬಿಜೆಪಿಯಲ್ಲಿ ಹಾಗೆ ಮಾಡಲು ಬಿಡುವುದಿಲ್ಲ’ ಎಂದು ಆರೋಪಿಸಿದರು.  

ಕಲ್ಯಾಣಿ ಅವರು ಈ ತಿಂಗಳ ಆರಂಭದಲ್ಲಿ ಬಿಜೆಪಿ ತೊರೆದಿದ್ದರು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು