ಶನಿವಾರ, ಆಗಸ್ಟ್ 13, 2022
23 °C

ಅತ್ಯಾಚಾರ ಆರೋಪ: ಬಿಜೆಪಿ ಶಾಸಕ ಮಹೇಶ್‌ ನೇಗಿ ವಿರುದ್ಧ ಎಫ್‌ಐಆರ್‌ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಡೆಹ್ರಾಡೂನ್‌: ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್‌ ನೇಗಿ ವಿರುದ್ಧ ಅತ್ಯಾಚಾರ ಆರೋಪಡಿ ಎಫ್‌ಐಆರ್‌ ದಾಖಲಿಸಲಾಗಿದೆ. 

ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಶಾಸಕ ಮಹೇಶ್‌ ನೇಗಿ ವಿರುದ್ಧ ಅತ್ಯಾಚಾರ ಮತ್ತು ಅವರ ಪತ್ನಿ ರಿತಾ ನೇಗಿಯ ವಿರುದ್ಧ ಬೆದರಿಕೆ ಆರೋಪದಡಿ ನೆಹರೂ ಕಾಲೋನಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡೆಹ್ರಾಡೂನ್‌ ವರಿಷ್ಠಾಧಿಕಾರಿ ಶ್ವೇತ ಚೌಬೆ ಅವರು ತಿಳಿಸಿದರು.

ಈ ಸಂಬಂಧ ಮಹಿಳೆಯೊಬ್ಬರು ಆ.16 ರಂದು ದೂರು ದಾಖಲಿಸಿದ್ದರು. ದೂರಿನಲ್ಲಿ ‘ಶಾಸಕ ಮಹೇಶ್‌ ನೇಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ.  ಶಾಸಕರೇ ನನ್ನ ಮಗಳ ತಂದೆ. ಬೇಕಾದ್ದಲ್ಲಿ ಡಿಎನ್‌ಎ ಪರೀಕ್ಷೆಗೂ ತಾನು ಸಿದ್ಧ’ ಎಂದು ಮಹಿಳೆ ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದರು. 

ಈ ಆರೋಪಗಳನ್ನು ತಳ್ಳಿ ಹಾಕಿರುವ ಮಹೇಶ್‌ ನೇಗಿ, ‘ಇದು ನನ್ನ ಹೆಸರಿಗೆ ಕಳಂಕ ತರಲು ನಡೆದಿರುವ ಪಿತೂರಿ. ಇದರಲ್ಲಿ ಕಾಂಗ್ರೆಸ್‌ ನಾಯಕರ ಕೈವಾಡವಿದೆ. ನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ’ ಎಂದು ಹೇಳಿದರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು