ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಬಿಜೆಪಿ ಶಾಸಕ ರಾಜಾ ಸಿಂಗ್‌ಗೆ ಒಂದು ವರ್ಷ ಜೈಲು

Last Updated 30 ಜನವರಿ 2021, 6:14 IST
ಅಕ್ಷರ ಗಾತ್ರ

ಹೈದರಾಬಾದ್: ಬಿಜೆಪಿ ಶಾಸಕ ರಾಜಾ ಸಿಂಗ್‌ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ಸೆಷೆನ್ಸ್ ಕೋರ್ಟ್ ಆದೇಶ ನೀಡಿದೆ.

2015ರಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಲ್ಲೆ ನಡೆಸಿದ್ದು ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಲ್ಲಿ ಸಿಂಗ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ನ್ಯಾಯಾಲಯವು ಜಾಮೀನು ನೀಡಿದ್ದು, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT