ಸೋಮವಾರ, ಮಾರ್ಚ್ 20, 2023
24 °C

ಕಾಂಗ್ರೆಸ್ ‘ಗೃಹಲಕ್ಷ್ಮಿ’ ಬಗ್ಗೆ ಗೇಲಿ ಮಾಡಿದ ಬಿಜೆಪಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೃಹಲಕ್ಷ್ಮೀ ಕಾರ್ಯಕ್ರಮದ ಮೂಲಕ ರಾಜ್ಯದ ಯಜಮಾನಿಗೆ ಮಾಸಿಕ ₹2,000 ನೀಡುವ ಕಾಂಗ್ರೆಸ್‌ನ ಭರವಸೆಯನ್ನು ಬಿಜೆಪಿ ಸೋಮವಾರ ಗೇಲಿ ಮಾಡಿದೆ.

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಬೆಂಗಳೂರಿನಲ್ಲಿ ನಡೆದ ‘ನಾ ನಾಯಕಿ’ ಕಾರ್ಯಕ್ರದಮದಲ್ಲಿ ಘೋಷಿಸಿತು. ಕಾರ್ಯಕ್ರಮದ ಚೆಕ್ ಪ್ರತಿಕೃತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ರಾಜ್ಯ ನಾಯಕರು ಹಸ್ತಾಂತರಿಸಿದರು.

ಇದರ ಬಗ್ಗೆ ವ್ಯಂಗ್ಯ ಮಾಡಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಬಲೀಕರಣ ಬಿಡಿ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳನ್ನೇ ಎಂದೂ ಪ್ರಶ್ನಿಸದ ಪ್ರಿಯಾಂಕಾ ಗಾಂಧಿ ಇದೀಗ ಗೃಹಲಕ್ಷ್ಮಿ ಎಂಬ ಯೋಜನೆ ಜಾರಿಗೊಳಿಸುತ್ತೇವೆ ಎಂದಿರುವುದು ಕಾಂಗ್ರೆಸ್’ನ ಗ್ಯಾರಂಟಿ ಸುಳ್ಳಿನ ಸರಣಿಯ ಮುಂದುವರಿದ ಭಾಗ. ಈ ಡೋಂಗಿತನದ ಅರಿವು ರಾಜ್ಯದ ಜನರಿಗಿದೆ’ ಎಂದು ಹೇಳಿದೆ.

ಅಧಿಕಾರಕ್ಕೆ ಬಂದರೆ ಈಡೇರಿಸುವುದಾಗಿ ಕಾಂಗ್ರೆಸ್‌ ಘೋಷಿಸಿದ ಎರಡನೇ ಕಾರ್ಯಕ್ರಮವಿದು. ಇದಕ್ಕೂ ಮೊದಲು 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವ ಕಾರ್ಯಕ್ರಮವನ್ನು ಕಾಂಗ್ರೆಸ್‌ ಘೋಷಿಸಿದೆ. ಇದರ ಬಗ್ಗೆಯೂ ಬಿಜೆಪಿ ಕುಹಕವಾಡಿದೆ.

ಇಂಧನ ಸಚಿವ ಸುನಿಲ್‌ ಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಡುವೆ ಒಂದು ಹಂತದ ವಾಗ್ವಾದವೂ ನಡೆದಿದೆ.

ಉಚಿತ ವಿದ್ಯುತ್ ಎಂಬುದು ಕಾಂಗ್ರೆಸ್‌ನ ಸುಳ್ಳು ಡಂಗುರ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಇಲಾಖೆಯನ್ನು ಲಾಭದ ಹಳಿಗೆ ತಂದು ಜನರಿಗೆ 200 ಯುನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸಲಾಗುವುದು. ಉದ್ಘಾಟನಾ ಸಮಾರಂಭಕ್ಕೆ ಸುನಿಲ್‌ ಅವರನ್ನೂ ಆಹ್ವಾನಿಸುತ್ತೇವೆ ಎಂದಿದ್ದಾರೆ.

ಇವುಗಳನ್ನೂ ಓದಿ 

ಭರವಸೆ ಉಚಿತ, ಸಾಲ ಖಚಿತ ಎಂಬ ಅರ್ಥನೀತಿ ಬಿಡಿ: ಸಿದ್ದರಾಮಯ್ಯಗೆ ಸಚಿವ ಸುನಿಲ್ ಸಲಹೆ

ಉಚಿತ ವಿದ್ಯುತ್ ಕಾಂಗ್ರೆಸ್‌ನ ಸುಳ್ಳು ಡಂಗುರ: ಸುನಿಲ್ ಕುಮಾರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು