ಶಿಮ್ಲಾ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ (62) ಅವರ ಮೃತದೇಹವು ದೆಹಲಿಯಲ್ಲಿರುವ ಅವರ ಮನೆಯಲ್ಲಿ ಬುಧವಾರ ಪತ್ತೆಯಾಗಿದೆ.
ಶರ್ಮಾ ಅವರ ಮೃತದೇಹವು ಅವರದ್ಧೇ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಕೋಣೆಯನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಘಟನಾ ಸ್ಥಳದಿಂದ ಯಾವುದೇ ಮರಣ ಪತ್ರ ಸಿಕ್ಕಿಲ್ಲ. ಇದು ಆತ್ಮಹತ್ಯೆ ಪ್ರಕರಣವೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಕಳೆದ ಹಲವು ತಿಂಗಳಿನಿಂದ ರಾಮ್ ಶರ್ಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
‘ರಾಮ್ ಶರ್ಮಾ ಅವರು ತಮ್ಮ ಫೋನ್ ಕರೆಗೆ ಉತ್ತರಿಸುತ್ತಿರಲಿಲ್ಲ. ಈ ಬಗ್ಗೆ ಅವರ ಆಪ್ತ ಸಹಾಯಕ ನಮಗೆ ಈ ಬಗ್ಗೆ ಮಾಹಿತಿ ನೀಡಿದರು. ತಕ್ಷಣವೇ ಅವರ ಮನೆಗೆ ತೆರಳಿ ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಅವರ ದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’ ಅವರು ಮಾಹಿತಿ ನೀಡಿದರು.
ಮಂಡಿ ಜಿಲ್ಲೆಯ ಜಲ್ಪೆಹರ ಗ್ರಾಮದಲ್ಲಿ 1958ಜೂನ್ 10 ರಂದು ಜನಿಸಿದ್ದ ಇವರು, 2014 ಮತ್ತು 2019ರಲ್ಲಿ ಮಂಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.
ಇವರ ನಿಧನದ ಕಾರಣ ಬಿಜೆಪಿ ಸಂಸದೀಯ ಪಕ್ಷದ ಸಭೆಯನ್ನು ಮುಂದಕ್ಕೆ ಹಾಕಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.