ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಸಂಜೆ 4ಕ್ಕೆ ತೀರಥ್ ಸಿಂಗ್ ರಾವತ್ ಪ್ರಮಾಣ ವಚನ

Last Updated 10 ಮಾರ್ಚ್ 2021, 7:05 IST
ಅಕ್ಷರ ಗಾತ್ರ

ಡೆಹರಾಡೂನ್:ಬಿಜೆಪಿ ಸಂಸದ ತೀರಥ್ ಸಿಂಗ್ ರಾವತ್ ಉತ್ತರಾಖಂಡದ ಮುಂದಿನ ಮುಖ್ಯಮಂತ್ರಿ ಎಂದು ಡೆಹ್ರಾಡೂನ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಬುಧವಾರಪ್ರಕಟಿಸಿದ್ದಾರೆ.

ಉತ್ತರಾಖಂಡದ ಬಿಜೆಪಿಯ ಮಾಜಿ ಅಧ್ಯಕ್ಷರಾದ ತೀರಥ್ ಸಿಂಗ್ ರಾವತ್, 2000-02ರವರೆಗೆ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪಕ್ಷದಲ್ಲಿ ತಮ್ಮ ವಿರುದ್ಧ ಅಸಮಾಧಾನ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ನಿನ್ನೆ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಿಧಾನಸಭೆ ಚುನಾವಣೆಗೆ ಇನ್ನೇನು ವರ್ಷವಷ್ಟೇ ಬಾಕಿ ಉಳಿದಿರುವ ವೇಳೆ, ತ್ರಿವೇಂದ್ರ ಸಿಂಗ್​ ರಾವತ್​ ಕಾರ್ಯಶೈಲಿ ಬಗ್ಗೆ ಹಲವಾರು ಸಚಿವರು ಮತ್ತು ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರದಲ್ಲಿನ ಈ ಬೆಳವಣಿಗೆ ಹಿನ್ನಲೆಯಲ್ಲೇ ದೆಹಲಿಗೆ ತೆರಳಿದ್ದ ಅವರು ಬಿಜೆಪಿ ಹೈ ಕಮಾಂಡ್‌ನೊಂದಿಗೆ ಚರ್ಚಿಸಿದ್ದರು. ಸೋಮವಾರ ದೆಹಲಿಯಲ್ಲಿ ಕೇಂದ್ರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಭೇಟಿ ಬಳಿಕ ರಾವತ್​ ರಾಜೀನಾಮೆಯ ವಿಚಾರಗಳು ಹೆಚ್ಚಾಗಿ ಕೇಳಿಬಂದಿತ್ತು.

60 ವರ್ಷದ ರಾವತ್ ಅವರು, ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT