ಸೋಮವಾರ, ಜುಲೈ 4, 2022
22 °C

ಬ್ಯಾಂಕ್, ರೈಲ್ವೆ ಖಾಸಗೀಕರಣದಿಂದ 5 ಲಕ್ಷ ಮಂದಿಗೆ ಉದ್ಯೋಗ ನಷ್ಟ: ವರುಣ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಬ್ಯಾಂಕ್‌ಗಳು ಮತ್ತು ರೈಲ್ವೆ ಖಾಸಗೀಕರಣದಿಂದ ಐದು ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಖಾಸಗೀಕರಣಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ಸಾರ್ವಜನಿಕರ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾದ ಸರ್ಕಾರ ಸಾಮಾಜಿಕ ಅಸಮಾನತೆ ಸೃಷ್ಟಿಸಿ ಬಂಡವಾಳಶಾಹಿಯನ್ನು ಉತ್ತೇಜಿಸಬಾರದು’ ಎಂದು ಉಲ್ಲೇಖಿಸಿದ್ದಾರೆ.

‘ಬ್ಯಾಂಕ್‌ಗಳು ಮತ್ತು ರೈಲ್ವೆ ಖಾಸಗೀಕರಣದಿಂದ ಐದು ಲಕ್ಷ ಮಂದಿ ಬಲವಂತವಾಗಿ ನಿವೃತ್ತಿಯಾಗಬೇಕಾಗುತ್ತದೆ. ಅಂದರೆ ಅಷ್ಟೂ ಮಂದಿ ಕೆಲಸ ಕಳೆದುಕೊಂಡಂತೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 

‘ಪ್ರತಿಯೊಂದು ಉದ್ಯೋಗ ನಷ್ಟವೂ ಲಕ್ಷಾಂತರ ಕುಟುಂಬಗಳು ಭರವಸೆಯನ್ನೇ ಕಳೆದುಕೊಳ್ಳುವಂತೆ ಮಾಡಲಿದೆ’ ಎಂದು ಅವರು ಉಲ್ಲೇಖಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ವರುಣ್ ಗಾಂಧಿ ಅವರು ಕೃಷಿ ಕಾಯ್ದೆಗಳು, ಹಣದುಬ್ಬರ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದಾರೆ. ಆದರೆ, ಇದು ಬಿಜೆಪಿಯ ಅಧಿಕೃತ ನಿಲುವಲ್ಲ.

ಇದನ್ನೂ ಓದಿ: 

ಏರಿಕೆಯಾಗುತ್ತಿರುವ ಹಣದುಬ್ಬರ ಮತ್ತು ಹೆಚ್ಚುತ್ತಿರುವ ನಿರುದ್ಯೋಗ ಪ್ರಮಾಣದ ಬಗ್ಗೆ ಕಳೆದ ತಿಂಗಳು ತಮ್ಮ ಲೋಕಸಭಾ ಕ್ಷೇತ್ರ ಫಿಲಿಭಿತ್‌ನಲ್ಲಿ ಪ್ರಸ್ತಾಪಿಸಿದ್ದ ಅವರು, ದೇಶದ ಪ್ರಮುಖ ಸಂಪನ್ಮೂಲಗಳನ್ನು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು