ಮಂಗಳವಾರ, ಮಾರ್ಚ್ 28, 2023
32 °C

ತ್ರಿಪುರಾ: ರಾಜ್ಯಸಭೆ ಚುನಾವಣೆಗೆ ಬಿಪ್ಲವ್‌ ಕುಮಾರ್‌ ದೇವ್‌ ಬಿಜೆಪಿ ಅಭ್ಯರ್ಥಿ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಅಗರ್ತಲ: ತ್ರಿಪುರಾದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲವ್‌ ಕುಮಾರ್‌ ದೇವ್‌ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ತ್ರಿಪುರಾದಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಸೆಪ್ಟೆಂಬರ್ 22ರಂದು ಚುನಾವಣೆ ನಡೆಯಲಿದೆ.

ಪಕ್ಷದ ಅಭ್ಯರ್ಥಿಯನ್ನಾಗಿ ದೇವ್ ಅವರನ್ನು ಕೇಂದ್ರ ಚುನಾವಣಾ ಸಮಿತಿ ನಾಮ ನಿರ್ದೇಶನ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.

‘ತ್ರಿಪುರಾದಿಂದ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ಅವರಿಗೆ ಧನ್ಯವಾದಗಳು. ತ್ರಿಪುರಾದ ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧನಾಗಿದ್ದೇನೆ’ ಎಂದು ಬಿಪ್ಲವ್‌ ಕುಮಾರ್‌ ದೇವ್‌ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು