ಡಿಸಿಎಂ ಸ್ಥಾನ ಬಿಟ್ಟುಕೊಟ್ಟ ಸುಶೀಲ್ ಮೋದಿಗೆ ರಾಜ್ಯಸಭಾ ಟಿಕೆಟ್

ಬಿಹಾರ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಗೆದ್ದು ಸರ್ಕಾರ ರಚಿಸಿದ ನಂತರ ಉಪ ಮುಖ್ಯಮಂತ್ರಿ ಸ್ಥಾನ ತ್ಯಾಗ ಮಾಡಿದ್ದ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನೀಡಿದೆ.
ಬಿಹಾರದಲ್ಲಿ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸುಶೀಲ್ ಕುಮಾರ್ ಮೋದಿ ಅವರು ತನ್ನ ಅಭ್ಯರ್ಥಿ ಎಂದು ಬಿಜೆಪಿ ಶುಕ್ರವಾರ ಘೋಷಣೆ ಮಾಡಿದೆ.
ಇದನ್ನು ನೋಡಿ: ದುರ್ಬಲರಾದ ನಿತೀಶ್: ಸರ್ಕಾರದ ಸೂತ್ರ ಈಗ ಬಿಜೆಪಿ ಕೈಲಿ
ಈ ಹಿಂದಿನ ಎನ್‌ಡಿಎ ಸರ್ಕಾರಗಳಲ್ಲಿ ಮುಖ್ಯಮಂತ್ರಿ ನಿತೀಶ್ ಅವರೊಂದಿಗೆ ಸುಶೀಲ್ ಉಪ ಮುಖ್ಯಮಂತ್ರಿಯಾಗಿರುತ್ತಿದ್ದರು. ಈ ಬಾರಿಯೂ ಅಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತಾದರೂ, ಹೈಕಮಾಂಡ್ ಸೂಚನೆ ಮೇರೆಗೆ ಸುಶೀಲ್ ಡಿಸಿಎಂ ಸ್ಥಾನ ವಹಿಸಿಕೊಂಡಿರಲಿಲ್ಲ.
ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ಯ ರಾಮವಿಲಾಸ ಪಸ್ವಾನ್ ಅವರ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಅಲ್ಲಿ ಉಪ ಚುನಾವಣೆ ಎದುರಾಗಿದೆ. ಡಿ. 27ರಂದು ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.