ಗುರುವಾರ , ಜುಲೈ 7, 2022
23 °C

ಇಂಧನ ಬೆಲೆ ಇಳಿಕೆಯು ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಖರ್ಗೆ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ತೈಲ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ. 

ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿರುವ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ತೈಲ ಬೆಲೆ ಏರಿಕೆ ವಿರುದ್ಧ ಮಾರ್ಚ್ 31ರಂದು ದೆಹಲಿಯ ವಿಜಯ್‌ ಚೌಕ್‌ನಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. 

‘ಇಂಧನ ಬೆಲೆಗಳನ್ನು ಇಳಿಸಿದ್ದು ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು. ಈಗ ಅವರು(ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ) ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನೆಪದಲ್ಲಿ ತೈಲ ಬೆಲೆಯನ್ನು ಹೆಚ್ಚಿಸುವ ಮೂಲಕ ಸರಿದೂಗಿಸುತ್ತಿದ್ದಾರೆ’ ಎಂದು ಖರ್ಗೆ ಹರಿಹಾಯ್ದಿದ್ದಾರೆ. 

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 80 ಪೈಸೆಯಷ್ಟು ಹೆಚ್ಚಿಸಿವೆ. ಇದರಿಂದಾಗಿ, ಕಳೆದ ಒಂಬತ್ತು ದಿನಗಳಲ್ಲಿ ಎಂಟು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹5.60ರಷ್ಟು ಹೆಚ್ಚಿಸಿದಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು