ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ, ನಿಷಾದ್‌ ಪಕ್ಷದ ಮೈತ್ರಿ ಖಚಿತ

Last Updated 24 ಸೆಪ್ಟೆಂಬರ್ 2021, 10:11 IST
ಅಕ್ಷರ ಗಾತ್ರ

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ನಿಷಾದ್‌ ಪಕ್ಷದ ಮುಖಂಡ ಸಂಜಯ್ ನಿಷಾದ್ ಪ್ರಕಟಿಸಿದ್ದಾರೆ.

ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಸಮ್ಮುಖದಲ್ಲಿ ಶುಕ್ರವಾರ ಸಂಜಯ್ ನಿಷಾದ್ ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಖಚಿತಪಡಿಸಿದ್ದಾರೆ.

ಈ ಎರಡು ಪಕ್ಷಗಳು 2019ರ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದವು.

‘ನಮ್ಮ ಪಕ್ಷ ನಿಷಾದ್ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ. 2022ರ ವಿಧಾನಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿದ್ದೇವೆ. ಎರಡೂ ಪಕ್ಷದ ನಾಯಕರು ಶುಕ್ರವಾರ ಔಪಚಾರಿಕವಾಗಿ ಮೈತ್ರಿ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ‘ ಎಂದು ಧರ್ಮೇಂದ್ರ ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದರು.

ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನ್, ‘ಕ್ಷೇತ್ರ ಹಂಚಿಕೆ ವಿಚಾರವನ್ನು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುತ್ತದೆ‘ ಎಂದು ಉತ್ತರಿಸಿದರು.

‘ನಿಶಾದ್ ಪಕ್ಷವಲ್ಲದೇ, ನಾವು ಅಪ್ನಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಈ ಮೂಲಕ ರಾಜ್ಯದಲ್ಲಿ ಸುಭದ್ರ ಸರ್ಕಾರ ರಚಿಸಲು ಒಟ್ಟಾಗಿ ಕೆಲಸ ಮಾಡುತ್ತೇವೆ‘ ಎಂದು ಪ್ರಧಾನ್ ತಿಳಿಸಿದರು.

‘ಮುಂದಿನ ಚುನಾವಣೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲೇ ಎದುರಿಸುತ್ತೇವೆ‘ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT