ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಡಾ.ಶರ್ಮಾ, ಟಿಎಂಸಿಯ ಆರ್‌.ಚಟರ್ಜಿ ಲಸಿಕೆ ಪಡೆದ ಮೊದಲ ರಾಜಕಾರಣಿಗಳು

Last Updated 16 ಜನವರಿ 2021, 11:58 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಬಿಜೆಪಿ ಸಂಸದ ಡಾ.ಮಹೇಶ್ ಶರ್ಮಾ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ರವೀಂದ್ರನಾಥ್‌ ಚಟರ್ಜಿ ಅವರು ಕೋವಿಡ್‌ ಲಸಿಕೆ ಪಡೆದ ಮೊದಲ ರಾಜಕಾರಣಿಗಳಾಗಿದ್ದಾರೆ.

ತರಬೇತಿ ಪಡೆದ ವೈದ್ಯರೂ ಆಗಿರುವ ಡಾ.ಶರ್ಮಾ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ನೋಯ್ಡಾ ಸೆಕ್ಟರ್ 27ರ ಆಸ್ಪತ್ರೆಯೊಂದರಲ್ಲಿ ಲಸಿಕೆ ಹಾಕಿಸಿಕೊಂಡರು. ಬಳಿಕ ಅರ್ಧ ಗಂಟೆ ಅವರ ಆಸ್ಪತ್ರೆ ವೈದ್ಯರ ನಿಗಾದಲ್ಲಿ ಇದ್ದರು ಎಂದು ವರದಿಯಾಗಿದೆ.

‘ಒಬ್ಬ ವೈದ್ಯನಾಗಿ ಕೊರೊನಾ ವೈರಸ್ ಲಸಿಕೆ ಪಡೆದಿದ್ದೇನೆ. ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’ಎಂದು ಡಾ.ಶರ್ಮಾ ಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಕತ್ವಾ ದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರಾಗಿರುವ ರವೀಂದ್ರನಾಥ ಚಟರ್ಜಿ ಅವರು ಲಸಿಕೆಯನ್ನು ಹಾಕಿಸಿಕೊಂಡರು. ಶಾಸಕರನ್ನು 30 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತಿ ದೊಡ್ಡ ಲಸಿಕೆ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕೋವಿಡ್‌ ಅಂತ್ಯದ ಆರಂಭವಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT