ಗುರುವಾರ , ಸೆಪ್ಟೆಂಬರ್ 23, 2021
24 °C

ಭೂಪೇಂದ್ರ ಪಟೇಲ್ ಗುಜರಾತ್‌ನ ನೂತನ ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಂಧೀನಗರ: ಗುಜರಾತ್‌ ಮುಖ್ಯಮಂತ್ರಿ ಸ್ಥಾನಕ್ಕೆ ಹಿರಿಯ ನಾಯಕ ವಿಜಯ್‌ ರೂಪಾನಿ ಅವರು ರಾಜೀನಾಮೆ ನೀಡಿದ ಬಳಿಕ ಇದೀಗ ಆ ಸ್ಥಾನಕ್ಕೆ ಭೂಪೇಂದ್ರ ಪಟೇಲ್‌ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರಾದ ನರೇಂದ್ರ ಸಿಂಗ್‌ ತೋಮರ್‌, ಪ್ರಲ್ಹಾದ್ ಜೋಶಿ ಹಾಗೂ ತರುಣ್‌ ಚೌಂಗ್‌ ನೇತೃತ್ವದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗುಜರಾತ್‌ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್‌ ರಾಜೀನಾಮೆ

ಪಟೇಲ್‌ ಘಾಟ್‌ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದು, ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸಿದ್ದರು.

ಪಟೇಲ್‌, ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು