ಭಾನುವಾರ, ಸೆಪ್ಟೆಂಬರ್ 26, 2021
21 °C

ಮಹಿಳೆಯ ಕೊಲೆಗೆ ಬಿಜೆಪಿಯಿಂದಲೇ ಸಂಚು: ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

Mamata Banerjee

ನಂದಿಗ್ರಾಮ: ಬಿಜೆಪಿಯು ಅದೇ ಪಕ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡಲು ಸಂಚು ರೂಪಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿಯು ಅದೇ ಪಕ್ಷದ ಮಹಿಳೆಯೊಬ್ಬರನ್ನು ಹತ್ಯೆ ಮಾಡುವ ಮತ್ತೊಂದು ಸಂಚು ರೂಪಿಸಿದೆ. ಬಳಿಕ ಕೊಲೆ ಆರೋಪವನ್ನು ಬಂಗಾಳದ ಜನರ ಮೇಲೆ ಹೊರಿಸಲು ಮುಂದಾಗಿದೆ. ಉತ್ತರಪ್ರದೇಶ ಮತ್ತು ಬಿಹಾರದಿಂದ ಕರೆಸಿಕೊಂಡಿರುವ ಗೂಂಡಾಗಳ ಮೂಲಕ ಬಿಜೆಪಿಯು ಹತ್ಯೆಗೆ ಸಂಚು ರೂಪಿಸಿದೆ ಎಂದು ಹೇಳಿದ್ದಾರೆ.

ಓದಿ: 

ಬಿಜೆಪಿ ಕಾರ್ಯಕರ್ತರೊಬ್ಬರ ತಾಯಿ ಮೇಲೆ ಇತ್ತೀಚೆಗೆ ಹಲ್ಲೆ ನಡೆದಿತ್ತು. ಗಂಭಿರವಾಗಿ ಗಾಯಗೊಂಡಿದ್ದ ಅವರು ನಿನ್ನೆ ಮೃತಪಟ್ಟಿದ್ದರು. ಮಹಿಳೆ ಮೇಲೆ ಟಿಎಂಸಿಯೇ ಹಲ್ಲೆ ನಡೆಸಿದೆ ಎಂದು ಬಿಜೆಪಿ ಆರೋಪಿಸಿತ್ತು. ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಕೂಡ ಟಿಎಂಸಿಯನ್ನು ದೂರಿದ್ದಾರೆ. ಇದರ ಬೆನ್ನಲ್ಲೇ ಮಮತಾ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿಯು ಉತ್ತರಪ್ರದೇಶ ಮತ್ತು ಬಿಹಾರದಿಂದ ಗೂಂಡಾಗಳನ್ನು ಕರೆಸಿಕೊಂಡು ರಾಜ್ಯದಲ್ಲಿ ಹಿಂಸಾಚಾರ ನಡೆಸುತ್ತಿದೆ ಎಂದು ಸೋಮವಾರ ಮಮತಾ ಆರೋಪಿಸಿದ್ದರು.

ಓದಿ: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು