ಮಂಗಳವಾರ, ಜನವರಿ 18, 2022
27 °C

ಪ್ರಧಾನಿ ಮೋದಿ ಭದ್ರತಾ ಲೋಪ: ದೇಶದಾದ್ಯಂತ ಪ್ರತಿಭಟನೆಗೆ ಬಿಜೆಪಿ ಸಿದ್ಧತೆ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

AFP PHOTO

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್‌ಗೆ ತೆರಳಿದ್ದ ಸಂದರ್ಭದಲ್ಲಿ ಉಂಟಾದ ಭದ್ರತಾ ಲೋಪವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಉದ್ದೇಶಿಸಿದೆ.

ಬಿಜೆಪಿ ಸಂಸದರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಶುಕ್ರವಾರ ಮೌನ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಅಲ್ಲದೆ, ರಾಷ್ಟ್ರವ್ಯಾಪಿಯಾಗಿ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದ್ದು, ಕಾಂಗ್ರೆಸ್ ಅಜೆಂಡಾವನ್ನು ಜನರಿಗೆ ವಿವರಿಸಲಿದ್ದೇವೆ ಎಂದು ಹೇಳಿದೆ.

ಜತೆಗೆ ಎಲ್ಲ ರಾಜ್ಯಗಳಲ್ಲೂ ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ಮನವಿ ನೀಡಲು ಬಿಜೆಪಿ ಯೋಜನೆ ರೂಪಿಸಿದೆ.

ಗುರುವಾರವೂ ಬಿಜೆಪಿ ಪಕ್ಷದ ವಿವಿಧ ಘಟಕಗಳು ಪಂಜಾಬ್ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು