ಶುಕ್ರವಾರ, ಏಪ್ರಿಲ್ 23, 2021
32 °C

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ: ಜೆ.ಪಿ.ನಡ್ಡಾ ಘೋಷಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ತಮಿಳುನಾಡಿನಲ್ಲಿ ಜೆ.‍ಪಿ.ನಡ್ಡಾ ಹಾಗೂ ಇತರೆ ಬಿಜೆಪಿ ಮುಖಂಡರು

ಮದುರೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಘೋಷಣೆಯಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ಈ ಘೋಷಣೆ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆ ಕ್ಷೇತ್ರಗಳಿಗೆ 2021ರ ಏಪ್ರಿಲ್‌–ಮೇನಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಎಐಎಡಿಎಂಕೆ ಜೊತೆಯಾಗಿ ಚುನಾವಣೆ ಎದುರಿಸಲಿವೆ.

ಜೆ.ಪಿ.ನಡ್ಡಾ ಅವರು ಮದುರೈನಲ್ಲಿ ಸಾರ್ವಜನಿಕ ರ್‍ಯಾಲಿಯಲ್ಲಿ ಮೈತ್ರಿ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಎರಡು ದಿನಗಳ ತಮಿಳುನಾಡು ಪ್ರವಾಸದಲ್ಲಿರುವ ಅವರು ಪುದುಚೇರಿಗೂ ಭೇಟಿ ನೀಡಲಿದ್ದಾರೆ.

ಇ.ಮಧುಸುಧನ್‌ ಎಐಎಡಿಎಂಕೆ ಪಕ್ಷದ ಅಧ್ಯಕ್ಷರಾಗಿದ್ದು, ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಹಾಗೂ ಒ ಪನ್ನೀರ್‌ ಸೆಲ್ವಂ ಪಕ್ಷದ  ಪ್ರಮುಖ ನಾಯಕರು.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು