ಶನಿವಾರ, ಜನವರಿ 16, 2021
24 °C

ಕೋವಿಡ್-19ನಿಂದ ಚೇತರಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೋವಿಡ್-19ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಈ ಬಗ್ಗೆ ಭಾನುವಾರ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ನಡ್ಡಾ, ನನ್ನ ಅನಾರೋಗ್ಯದ ಸಮಯದಲ್ಲಿ ನನಗಾಗಿ ಶುಭ ಹಾರೈಸಿದ, ಪ್ರಾರ್ಥಿಸಿದ ಮತ್ತು ನೈತಿಕ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನನ್ನ ಕುಟುಂಬ ಹಾಗೂ ನಾನು ಕೋವಿಡ್-19ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. ಈ ಸವಾಲಿನ ಸಮಯದಲ್ಲಿ ನನಗೆ ಆರೈಕೆ ನೀಡಿದ ಡಾ. ರಣದೀಪ್ ಗುಲೇರಿಯ ಹಾಗೂ ದಿರ್ ಏಮ್ಸ್ ಮತ್ತು ಅಲ್ಲಿನ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದರು.

ಈ ಮೊದಲು ಹೊಸ ವರ್ಷದ ಶುಭಾಶಯ ಕೋರಿರುವ ಜೆ.ಪಿ. ನಡ್ಡಾ, ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: 

ವರ್ಷಾಂತ್ಯದಲ್ಲಿ ಡಿಸೆಂಬರ್ ಎರಡನೇ ವಾರದಲ್ಲಿ ಜೆ.ಪಿ.ನಡ್ಡಾ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಪಶ್ಚಿಮ ಬಂಗಾಳ ಪ್ರವಾಸದ ಬಳಿಕ ಕೋವಿಡ್-19 ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೆ ಒಳಗಾಗಿದ್ದರು. ಬಳಿಕ ತಮ್ಮೊಂದಿಗೆ ಸಂಪರ್ಕ ಬಂದವರು ಮನೆಯಲ್ಲೇ ಇರುವಂತೆ ಮನವಿ ಮಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು