ಬುಧವಾರ, ಆಗಸ್ಟ್ 10, 2022
23 °C

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೋವಿಡ್‌–19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಕೋವಿಡ್‌–19 ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಅವರು ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ.

ಕೋವಿಡ್‌–19 ಲಕ್ಷಣಗಳು ನನ್ನಲ್ಲಿ ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೆ ಒಳಗಾದೆ. ಕೊರೊನಾ ಸೋಂಕು ದೃಢವಾಯಿತು ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

’ನನ್ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ವೈದ್ಯರ ಸಲಹೆ ಪ್ರಕಾರ ನಾನು ಎಲ್ಲಾ ಸೂಚನೆಗಳನ್ನು ಪಾಲಿಸುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಂಡು ಮನೆಯಲ್ಲಿಯೇ ಇರಿ ಎಂದು ಜೆ.ಪಿ ನಡ್ಡಾ ಹೇಳಿದ್ದಾರೆ.

ಈಚೆಗೆ ಜೆ.ಪಿ ನಡ್ಡಾ ಅವರು ಉತ್ತರಾಖಂಡ ಹಾಗೂ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು