ಸೋಮವಾರ, ಜುಲೈ 4, 2022
25 °C

ವಿಧಾನಸಭೆ ಚುನಾವಣೆ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದು ತಮಿಳುನಾಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹುರಿದುಂಬಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು (ಮಾ. 26) ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ನಡ್ಡಾ ಅವರು ತಿಟ್ಟಕುಡಿ ಮತ್ತು ತಿರುವಾಯುರಿನಲ್ಲಿ ಸಾರ್ವಜನಿಕ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್‌ 6 ರಂದು ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಾಂಗ್ರೆಸ್‌-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟಗಳ ನಡುವೆ ನೇರ ಹಣಾಹಣಿ ಇದೆ.

ಏಪ್ರಿಲ್‌ 6 ರಂದು ಕೇರಳ ವಿಧಾನಸಭೆಗೂ ಚುನಾವಣೆ ನಡೆಯಲಿರುವುದರಿಂದ, ನಡ್ಡಾ ಆ ರಾಜ್ಯಕ್ಕೂ ಭೇಟಿ ನೀಡಲಿದ್ದಾರೆ. ಕಣ್ಣೂರಿನಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು