ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌| ಬಿಜೆಪಿ ಜೊತೆ ಕೈಜೋಡಿಸಿದ ಅಮರಿಂದರ್‌ ಸಿಂಗ್‌: ಮೈತ್ರಿ ಘೋಷಣೆ

Last Updated 17 ಡಿಸೆಂಬರ್ 2021, 14:11 IST
ಅಕ್ಷರ ಗಾತ್ರ

ಚಂಡೀಗಢ: ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಶುಕ್ರವಾರ ಔಪಚಾರಿಕವಾಗಿ ಘೋಷಿಸಿತು.

ಸಿಂಗ್ ಶುಕ್ರವಾರ ಬಿಜೆಪಿಯ ಪಂಜಾಬ್ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಜೇಂದ್ರ ಶೇಖಾವತ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಸಭೆಯ ಬಳಿಕ ಉಭಯ ಪಕ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು.

‘ಬಿಜೆಪಿ ಮತ್ತು ಅಮರಿಂದರ್ ಸಿಂಗ್ ಅವರ ಪಕ್ಷ ಪಂಜಾಬ್‌ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸಲಿವೆ. ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸುತ್ತೇನೆ’ ಎಂದು ಶೇಖಾವತ್ ಮಾಧ್ಯಮಗಳಿಗೆ ತಿಳಿಸಿದರು.

ಸೀಟು ಹಂಚಿಕೆಯ ವಿವರಗಳನ್ನು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುವುದು ಎಂದು ಶೇಖಾವತ್ ಹೇಳಿದ್ದಾರೆ.

‘ಮೈತ್ರಿಕೂಟವು ಖಂಡಿತವಾಗಿಯೂ ಚುನಾವಣೆಯಲ್ಲಿ ಶೇಕಡಾ 101 ರಷ್ಟು ಗೆಲುವು ಸಾಧಿಸಲಿದೆ. ಗೆಲುವೇ ಸೀಟು ಹಂಚಿಕೆಯ ಪ್ರಮುಖ ಮಾನದಂಡವಾಗಲಿದೆ,’ ಎಂದು ಸಿಂಗ್ ಹೇಳಿದರು.

ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ತಮ್ಮದೇ ಸ್ವಂತ ಪಕ್ಷ ‘ಪಂಜಾಬ್ ಲೋಕ ಕಾಂಗ್ರೆಸ್’ ಸ್ಥಾಪಿಸಿದರು. ಈ ಹಿಂದೆ, ಕೃಷಿ ಕಾಯ್ದೆಯ ಕಾರಣಗಳಿಗಾಗಿ ಬಿಜೆಪಿಯು ಪಂಜಾಬ್‌ನ ಶಿರೋಮಣಿ ಅಕಾಲಿದಳದ ಮೈತ್ರಿಯನ್ನು ಮುರಿದುಕೊಂಡಿತ್ತು.

ಶೇಖಾವತ್ ಅವರು ಈ ತಿಂಗಳ ಆರಂಭದಲ್ಲಿ ಚಂಡೀಗಢದಲ್ಲಿ ಅಮರೀಂದರ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT