ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನ ಭಾರತದಲ್ಲಿ ಪೆಟ್ರೋಲ್‌ ಬೆಲೆ ₹93, ರಾವಣನ ಲಂಕೆಯಲ್ಲಿ ₹51: ಸ್ವಾಮಿ ಟೀಕೆ

Last Updated 2 ಫೆಬ್ರುವರಿ 2021, 9:13 IST
ಅಕ್ಷರ ಗಾತ್ರ

ದೆಹಲಿ: ಪೆಟ್ರೋಲ್‌ ದರ ಏರಿಕೆ ಬಗ್ಗೆ ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಮಾಡಿದ್ದಾರೆ.

ಈ ಕುರಿತು ಮಂಗಳವಾರ ಬೆಳಗ್ಗೆ ಟ್ವೀಟ್‌ ಮಾಡಿರುವ ಅವರು, 'ರಾಮನ ಭಾರತದಲ್ಲಿ ಪೆಟ್ರೋಲ್‌ ದರ ₹93, ಸೀತೆಯ ನೇಪಾಳದಲ್ಲಿ ₹53, ರಾವಣನ ಶ್ರೀಲಂಕಾದಲ್ಲಿ ₹51,' ಎಂದು ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ವಾಮಿ ಅವರ ಟ್ವೀಟ್‌ ಅನ್ನು ಮಂಗಳವಾರ ಮಧ್ಯಾಹ್ನದ ಹೊತ್ತಿಗೆ 57 ಸಾವಿರಕ್ಕೂ ಅಧಿಕ ಮಂದಿ ಲೈಕ್‌ ಮಾಡಿದ್ದರೆ, 15 ಸಾವಿರಕ್ಕೂ ಅಧಿಕ ಮಂದಿ ರೀಟ್ವೀಟ್‌ ಮಾಡಿಕೊಂಡಿದ್ದಾರೆ.

ಪ್ರತಿ ಲೀಟರ್ ಪೆಟ್ರೋಲ್ ದರ ಸುಮಾರು ₹90ರಷ್ಟಾಗಿರುವುದು ಕೇಂದ್ರ ಸರ್ಕಾರವು ಜನರ ಮೇಲೆ ನಡೆಸುತ್ತಿರುವ ಐತಿಹಾಸಿಕ ಶೋಷಣೆ ಎಂದು ಸುಬ್ರಮಣಿಯನ್ ಸ್ವಾಮಿ ಡಿಸೆಂಬರ್‌ನಲ್ಲಿ ಹೇಳಿದ್ದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಟ್ವೀಟ್ ಮಾಡಿದ್ದ ಅವರು, ‘ಸಂಸ್ಕರಣಗೊಂಡ ಬಳಿಕ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆ ₹30ರಷ್ಟಾಗುತ್ತದೆ. ಎಲ್ಲ ತೆರಿಗೆಗಳು, ಪೆಟ್ರೋಲ್‌ ಪಂಪ್ ಕಮಿಷನ್ ₹60ರಷ್ಟಾಗುತ್ತದೆ. ನನ್ನ ದೃಷ್ಟಿಯಲ್ಲಿ ಪೆಟ್ರೋಲ್‌ ಅನ್ನು ಗರಿಷ್ಠ ಪ್ರತಿ ಲೀಟರ್‌ಗೆ ₹40ರಂತೆ ಮಾರಾಟ ಮಾಡಬೇಕು’ ಎಂದು ಹೇಳಿದ್ದರು.

ಇವುಗಳನ್ನು ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT