ಮಂಗಳವಾರ, ಜೂನ್ 22, 2021
24 °C

ಪುದುಚೇರಿ ಮುಖ್ಯಮಂತ್ರಿಯಾಗಿ ರಂಗಸ್ವಾಮಿ ಪ್ರಮಾಣ ವಚನ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುದುಚೇರಿ: ಇಲ್ಲಿನ ‘ರಾಜ್‌ ನಿವಾಸ್’ದಲ್ಲಿ ಶುಕ್ರವಾರ ನಡೆದ ಸರಳ ಸಮಾರಂಭದಲ್ಲಿ ಪುದುಚೇರಿಯ ಮುಖ್ಯಮಂತ್ರಿಯಾಗಿ ಎಐಎನ್‌ಆರ್‌ಸಿ ನಾಯಕ ಎನ್‌. ರಂಗಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಲೆಫ್ಟಿನೆಂಟ್‌ ಗವರ್ನರ್‌ ತಮಿಳುಸೈ ಸೌಂದರರಾಜನ್‌ ಅವರು ರಂಗಸ್ವಾಮಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಂಗಸ್ವಾಮಿ ಅವರು ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. 

ತಮಿಳಿನಲ್ಲಿ ಮತ್ತು ದೇವರ ಹೆಸರಿನಲ್ಲಿ ರಂಗಸ್ವಾಮಿ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದರು. 

ಮುಂದಿನ ಕೆಲ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಎಐಎನ್‌ಆರ್‌ಸಿ ಮತ್ತು ಬಿಜೆಪಿ ಒಳಗೊಂಡ ಮೈತ್ರಿ ಸರ್ಕಾರದ ನೇತೃತ್ವವನ್ನು ರಂಗಸ್ವಾಮಿ ವಹಿಸಿಕೊಂಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು