ಭಾನುವಾರ, ಮೇ 29, 2022
30 °C

ಉತ್ತರ ಪ್ರದೇಶ; ಮೊದಲ ಹಂತದ ಚುನಾವಣೆಗೆ ಬಿಜೆಪಿಯ 30 ತಾರಾ ಪ್ರಚಾರಕರು

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಬಿಜೆಪಿ 30 ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ರಾಜ್ಯದಲ್ಲಿ ಮೊದಲ ಹಂತದ ವಿಧಾನಸಭೆ ಚುನಾವಣೆಗೆ ಪಕ್ಷದ ತಾರಾ ಪ್ರಚಾರಕರನ್ನಾಗಿ ಹೆಸರಿಸಲಾಗಿದೆ.

ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತಾರ್ ಅಬ್ಬಾಸ್ ನಖ್ವಿ, ಸಂಜೀವ್ ಬಲ್ಯಾನ್, ಜನರಲ್ ವಿ.ಕೆ. ಸಿಂಗ್, ಎಸ್.ಪಿ. ಸಿಂಗ್ ಬಘೇಲ್, ಸಾಧ್ವಿ ನಿರಂಜನ್ ಜ್ಯೋತಿ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಅಲ್ಲದೆ, ಉತ್ತರ ಪ್ರದೇಶದ ಉಸ್ತುವಾರಿ ರಾಧಾ ಮೋಹನ್ ಸಿಂಗ್, ರಾಜ್ಯದ ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮತ್ತು ಡಾ. ದಿನೇಶ್ ಶರ್ಮಾ ಅವರನ್ನು ರಾಜ್ಯದ ಮೊದಲ ಹಂತದ ಸ್ಟಾರ್ ಪ್ರಚಾರಕರನ್ನಾಗಿ ಹೆಸರಿಸಿದೆ.

ಪಟ್ಟಿಯಲ್ಲಿ, ಲೋಕಸಭಾ ಸದಸ್ಯೆ ಹೇಮಾ ಮಾಲಿನಿ, ಜಸ್ವಂತ್ ಸೈನಿ, ಅಶೋಕ್ ಕಟಾರಿಯಾ, ಸುರೇಂದ್ರ ನಗರ್, ಚೌಧರಿ ಭೂಪೇಂದ್ರ ಸಿಂಗ್, ಬಿ.ಎಲ್. ವರ್ಮಾ, ರಾಜವೀರ್ ಸಿಂಗ್ 'ರಾಜು ಭಯ್ಯಾ', ಕಾಂತಾ ಕರ್ದಮ್, ರಜನಿಕಾಂತ್ ಮಹೇಶ್ವರಿ, ಮೋಹಿತ್ ಬೇನಿವಾಲ್, ಧರ್ಮೇಂದ್ರ ಕಶ್ಯಪ್, ಜೆ.ಪಿ.ಎಸ್. ರಾಥೋಡ್ ಮತ್ತು ಭೋಲಾ ಸಿಂಗ್ ಖತೀಕ್ ಇದ್ದಾರೆ.

ಉತ್ತರ ಪ್ರದೇಶದ ಪಶ್ಚಿಮ ಭಾಗದ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ಉತ್ತರ ಪ್ರದೇಶ ವಿಧಾನಸಭೆಯ 403 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ 109 ಅಭ್ಯರ್ಥಿಗಳನ್ನು ಘೋಷಿಸಿದೆ. ಶನಿವಾರವಷ್ಟೇ ಬಿಜೆಪಿ 107 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಗರಾಜ್ ಜಿಲ್ಲೆಯ ಸಿರತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಮಂಗಳವಾರ ಬಿಜೆಪಿ ಇನ್ನಿಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು.

ಫೆಬ್ರುವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಫೆಬ್ರುವರಿ-ಮಾರ್ಚ್‌ನಲ್ಲಿ ಏಳು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು