ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹ ಶಾಸಕ, ಸಂಸದರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Last Updated 27 ಮಾರ್ಚ್ 2023, 16:09 IST
ಅಕ್ಷರ ಗಾತ್ರ

ನವದೆಹಲಿ: ಈ ಹಿಂದೆ ಅನರ್ಹಗೊಂಡಿದ್ದ ಐವರು ಸಂಸದರು ಸೇರಿದಂತೆ 12ಕ್ಕೂ ಹೆಚ್ಚು ಶಾಸಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ ಬಿಜೆಪಿ, ಆ ಸಮಯದಲ್ಲಿ ಪ್ರತಿಭಟನೆಗಳು ಮತ್ತು ಕಪ್ಪು ಬಟ್ಟೆಗಳು ಏಕೆ ಕಂಡುಬಂದಿಲ್ಲ ಎಂದು ಪ್ರಶ್ನಿಸಿದೆ. ‌

ಅನರ್ಹಗೊಂಡ ಶಾಸಕರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರು ಇದ್ದರು. ಈಗ ರಾಹುಲ್ ಗಾಂಧಿಯನ್ನು ಉಳಿಸಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು.

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಜೆಡಿಯುನ ಜಗದೀಶ್ ಶರ್ಮಾ ಅವರನ್ನು 2013ರಲ್ಲಿ ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಆದರೆ, ಆಗ ಯಾವುದೇ ಪ್ರತಿಭಟನೆ ನಡೆಯಲಿಲ್ಲ ಎಂದು ಗೋಯಲ್ ಹೇಳಿದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಹಾಗೂ 2023 ರಲ್ಲಿ ಎಸ್‌ಪಿ ಶಾಸಕ ಅಜಂ ಖಾನ್ ಅವರು ಅನರ್ಹಗೊಂಡಿದ್ದರು.

2013 ಮತ್ತು 2014ರಲ್ಲಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ವಿಧಾನಸಭೆಯಿಂದ ಅನರ್ಹತೆಗೆ ಒಳಗಾದ ಬಿಜಾವರ್‌ ಶಾಸಕಿ ಆಶಾ ರಾಣಿ ಮತ್ತು ಇಚಲಕರಂಜಿ ಶಾಸಕ ಸುರೇಶ್ ಹಲ್ವಾಂಕರ್ ಸೇರಿದಂತೆ ಬಿಜೆಪಿಯ ಇಬ್ಬರು ಶಾಸಕರು ಕೂಡ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರು ಸರಿಯಾದ ಕಾರ್ಯವಿಧಾನ ಅನುಸರಿಸುತ್ತಿದ್ದಾರೆ. ಒಬಿಸಿ ಸಮುದಾಯಕ್ಕೆ ರಾಹುಲ್ ಗಾಂಧಿ ಮಾಡಿರುವ ಅವಮಾನವನ್ನು ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಈಗ ಸದನಕ್ಕೆ ಅವಕಾಶ ನೀಡುತ್ತಿದ್ದಾರೆ ಎಂದು ಗೋಯಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT