ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಪ್ರಕರಣ: ಆರೋಗ್ಯ ವ್ಯವಸ್ಥೆಯ ಕುಸಿತಕ್ಕೆ ಬಿಜೆಪಿಯೇ ಕಾರಣ- ಅಖಿಲೇಶ್ ಯಾದವ್

Last Updated 23 ಏಪ್ರಿಲ್ 2021, 16:31 IST
ಅಕ್ಷರ ಗಾತ್ರ

ಲಖನೌ: ಲಖನೌದ ಕೋವಿಡ್-19 ನಿಯಂತ್ರಣ ಕೊಠಡಿಯಲ್ಲಿ ತೊಡಗಿರುವ ಅಧಿಕಾರಿಗಳು ತೊಂದರೆಯಲ್ಲಿರುವ ಜನರನ್ನು ಭೇಟಿಯಾಗುತ್ತಿಲ್ಲ ಹಾಗೂ ಅವರ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಂತಹ ಸಿಬ್ಬಂದಿ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶುಕ್ರವಾರ ಮುಖ್ಯಮಂತ್ರಿಯನ್ನು ಪ್ರಶ್ನಿಸಿದ್ದಾರೆ.

ಪ್ರತಿದಿನ ಮುಖ್ಯಮಂತ್ರಿಗಳು ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಆದರೆ ರಾಜ್ಯ ರಾಜಧಾನಿ ಲಖನೌ‌ದಲ್ಲಿ ಅಧಿಕಾರಿಗಳು ಜನರಿಗೆ ಸ್ಪಂದಿಸುತ್ತಿಲ್ಲ ಹಾಗೂ ಅವರ ಕರೆಗಳಿಗೆ ಉತ್ತರಿಸುತ್ತಿಲ್ಲ. ತೊಂದರೆಗೊಳಗಾದ ಜನರ ಕುಂದುಕೊರತೆಗಳನ್ನು ಕೇಳಲು ಯಾರೂ ಇಲ್ಲದಂತಾಗಿದೆ. ಅಂತಹವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಯಾದವ್ ಇಲ್ಲಿ ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ಸರ್ಕಾರಿ ಆಡಳಿತಾಂಗ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಕೋವಿಡ್-19ನಿಂದ ಜನರು ಸಾಯುತ್ತಿದ್ದಾರೆ ಎಂದು ಅವರು ಆರೋಪಿಸಿದರು.

'ಈ ಪರಿಸ್ಥಿತಿಯಲ್ಲಿ, ಕೆಲವರು ಔಷಧಿಗಳು, ಆಮ್ಲಜನಕ ಸಿಲಿಂಡರ್, ವೆಂಟಿಲೇಟರ್ ಮತ್ತು ಆಸ್ಪತ್ರೆ ಹಾಸಿಗೆಗಳ ಕಪ್ಪು ಮಾರಾಟದಲ್ಲಿ ತೊಡಗಿದ್ದಾರೆ ಮತ್ತು ಆಡಳಿತವು ಸ್ಥಗಿತಗೊಂಡಿದ್ದು, ಅವ್ಯವಸ್ಥೆಗಳ ಬಗ್ಗೆ ಮೂಕ ಪ್ರೇಕ್ಷಕರಂತಾಗಿ ಮಾರ್ಪಟ್ಟಿದೆ. ಆರೋಗ್ಯ ವ್ಯವಸ್ಥೆಯ ಕುಸಿತಕ್ಕೆ (ಆಡಳಿತಾರೂಢ) ಬಿಜೆಪಿ ಕಾರಣವಾಗಿದೆ' ಎಂದು ಅವರು ದೂರಿದರು.

ಬಿಜೆಪಿಯು 'ಈ ವಿಪತ್ತನ್ನು' 'ಅವಸರ್' (ಅವಕಾಶ) ಆಗಿ ಪರಿವರ್ತಿಸುತ್ತಿದೆ. ಎಲ್ಲ ವ್ಯವಸ್ಥೆಯು ಕಪ್ಪು ಮಾರುಕಟ್ಟೆಯಲ್ಲಿ ಮಾತ್ರ ಲಭ್ಯವಾಗುತ್ತಿದೆ' ಎಂದು ಆರೋಪಿಸಿದರು.

ಉತ್ತರ ಪ್ರದೇಶದಲ್ಲಿ ಒಂದು ದಿನದಲ್ಲಿ ದಾಖಲೆಯ 34,379 ಹೊಸ ಕೋವಿಡ್-19 ಪ್ರಕರಣಗಳು ಮತ್ತು 195 ಸಾವುಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆಯು 9,76,765ಕ್ಕೆ ಏರಿಕೆಯಾಗಿದೆ. ಈವರೆಗೂ ಸೋಂಕಿನಿಂದಾಗಿ 10,541 ಜನರು ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT