ಬುಧವಾರ, ಮಾರ್ಚ್ 29, 2023
25 °C

ಭಯ, ದ್ವೇಷದ ವಾತಾವರಣ ಸೃಷ್ಟಿ: ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ರಾಹುಲ್ ವಾಗ್ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಪಠಾಣ್‌ಕೋಟ್: ಬಿಜೆಪಿ, ಆರ್‌ಎಸ್‌ಎಸ್ ದೇಶದಲ್ಲಿ ಭಯ, ದ್ವೇಷ ಮತ್ತು ಹಿಂಸಾಚಾರದ ವಾತಾವರಣ ಸೃಷ್ಟಿ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.

ಪಂಜಾಬ್‌ನಲ್ಲಿ ಭಾರತ್ ಜೋಡೊ ಯಾತ್ರೆಯ ಕೊನೆಯ ದಿನವಾದ ಗುರುವಾರ ಪಠಾಣ್‌ಕೋಟ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ದೇಶದ ಜನರಲ್ಲಿ ಭಯ, ದ್ವೇಷ ಹುಟ್ಟಿಸುವ ಬಿಜೆಪಿ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 

ಬಿಜೆಪಿ-ಆರ್‌ಎಸ್‌ಎಸ್ ದೇಶದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ. ಒಂದು ಜಾತಿ ವಿರುದ್ಧ ಮತ್ತೊಂದು, ಒಂದು ಧರ್ಮದ ವಿರುದ್ಧ ಇನ್ನೊಂದು, ಒಂದು ಭಾಷೆಯ ವಿರುದ್ಧ ಮತ್ತೊಂದು ಹೋರಾಡುವಂತೆ ಮಾಡಿದೆ. ಬಿಜೆಪಿಯ ನೀತಿಗಳು ಒಂದಲ್ಲ ಒಂದು ರೀತಿಯಲ್ಲಿ ಭಯ ಹುಟ್ಟಿಸುವಂತೆ ಮಾಡಿವೆ ಎಂದು ಹೇಳಿದರು.

ಹಿಂದಿನ ಯುಪಿಎ ಸರ್ಕಾರದ ಯೋಜನೆಗಳನ್ನು ಉಲ್ಲೇಖ ಮಾಡಿದ ರಾಹುಲ್, ನಾವು ಭಯದ ವಾತಾವರಣವನ್ನು ತೊಡೆದು ಹಾಕಿದೆವು. ಮತ್ತೊಂದೆಡೆ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡಿದೆ ಎಂದು ದೂರಿದರು.

ರೈತರ ಹಿತಕ್ಕಾಗಿ ಬಿಜೆಪಿ ಏನನ್ನೂ ಮಾಡಿಲ್ಲ. ಕೃಷಿ ಕಾನೂನು ಜಾರಿಗೆ ತಂದು ರೈತರಲ್ಲಿ ಭಯ ಹುಟ್ಟಿಸಿದರು ಎಂದು ಹೇಳಿದರು.

ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ, ನೋಟು ಅಮಾನ್ಯೀಕರಣ, ಜಿಎಸ್‌ಟಿ ವಿರುದ್ಧವೂ ರಾಹುಲ್ ವಾಗ್ದಾಳಿ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು