ಭಾನುವಾರ, ಸೆಪ್ಟೆಂಬರ್ 19, 2021
29 °C

ಬಿಜೆಪಿ ಆಡಳಿತದ ರಾಜ್ಯಗಳಿಗೆ ಹೆಚ್ಚು ಲಸಿಕೆ ಪೂರೈಕೆ: ಮಮತಾ ಬ್ಯಾನರ್ಜಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ‘ಬಿಜೆಪಿ ಆಡಳಿತದ ರಾಜ್ಯಗಳಿಗೆ ಮಾತ್ರ ಕೋವಿಡ್‌–19 ಲಸಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.

ಈ ಬಗ್ಗೆ ಗುರುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು,‘ಹೆಚ್ಚು ಜನಸಾಂದ್ರತೆ ಹೊಂದಿರುವ ಪಶ್ಚಿಮ ಬಂಗಾಳದಂತಹ ರಾಜ್ಯಗಳಿಗೆ ಅಗತ್ಯವಿರುವಷ್ಟು ಲಸಿಕೆಗಳು ದೊರೆಯುತ್ತಿಲ್ಲ. ಈ ವಿಷಯವನ್ನು ಹಲವು ಬಾರಿ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ’ ಎಂದು ತಿಳಿಸಿದ್ದಾರೆ.

’ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ, ಗುಜರಾತ್‌ ಮತ್ತು ಕರ್ನಾಟಕಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸುತ್ತಿದೆ. ಇಂತಹ ಕ್ರಮಕ್ಕೆ ಆಕ್ಷೇಪವಿಲ್ಲ. ಆದರೆ, ಪಶ್ಚಿಮ ಬಂಗಾಳಕ್ಕೆ ಅನ್ಯಾಯವಾಗುತ್ತಿರುವುದನ್ನು ನೋಡುತ್ತ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಪೂರೈಸದಿದ್ದರೆ ಸಾಂಕ್ರಾಮಿಕ ಕಾಯಿಲೆಯಿಂದ ಗಂಭೀರ ಪರಿಸ್ಥಿತಿ ಸೃಷ್ಟಿಯಾಗುವ ಸಾಧ್ಯತೆ ಇದೆ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಪ್ರತಿ ದಿನ 11 ಲಕ್ಷ ಡೋಸ್‌ಗಳನ್ನು ನೀಡುವ ಸಾಮರ್ಥ್ಯ ನಮ್ಮ ಸರ್ಕಾರಕ್ಕಿದೆ. ಆದರೆ, ಅಗತ್ಯವಿರುವಷ್ಟು ಲಸಿಕೆ ಲಭ್ಯವಾಗದ ಕಾರಣ ಈಗ ಪ್ರತಿ ದಿನ ಕೇವಲ 4 ಲಕ್ಷ ಡೋಸ್‌ಗಳನ್ನು ಮಾತ್ರ ಹಾಕಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು