ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಭಾಷೆಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ಕಾಣುವ ಬಿಜೆಪಿ: ಮೋದಿ

ಅಕ್ಷರ ಗಾತ್ರ

ಜೈಪುರ: ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಭಾರತದ ಪ್ರತಿ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಬಿಜೆಪಿ ನೋಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಜೈಪುರದಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಶುಕ್ರವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು.

‘ಕಳೆದ ಕೆಲವು ದಿನಗಳಿಂದ ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಗಳು ನಡೆಯುತ್ತಿರುವುದನ್ನು ನಾವು ಗಮನಿಸಿದ್ದೇವೆ. ಬಿಜೆಪಿಯು ಪ್ರತಿಯೊಂದು ಪ್ರಾದೇಶಿಕ ಭಾಷೆಯಲ್ಲೂ ಭಾರತೀಯ ಸಂಸ್ಕೃತಿಯ ಪ್ರತಿಬಿಂಬವನ್ನು ಕಾಣುತ್ತದೆ. ಅವುಗಳನ್ನು ಪೂಜನೀಯವಾಗಿ ಪರಿಗಣಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಯೊಂದು ಪ್ರಾದೇಶಿಕ ಭಾಷೆಗೂ ಪ್ರಾಮುಖ್ಯತೆ ನೀಡಲಾಗಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT