ಬುಧವಾರ, ಡಿಸೆಂಬರ್ 8, 2021
23 °C

ಬಿಜೆಪಿ ಹೈಕಮಾಂಡ್ ಗೋವಾ ಸಿಎಂನೂ ಬದಲಾವಣೆ ಮಾಡಲಿದೆ ಎಂದ ಎಎಪಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿರುವುದನ್ನು ಮನಗಂಡಿರುವ ಬಿಜೆಪಿ, ಮುಂದಿನ ವರ್ಷ ಎದುರಾಗಲಿರುವ ವಿಧಾನಸಭಾ ಚುನಾವಣೆ ವೇಳೆಗೆ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಲು ನಿರ್ಧರಿಸುವುದು ನಂಬಲರ್ಹ ಮೂಲಗಳಿಂದ ತಿಳಿದು ಬಂದಿದೆ ಎಂದು ಎಎಪಿ ಶನಿವಾರ ಹೇಳಿಕೊಂಡಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ, ಸಾವಂತ್ ನಾಯಕತ್ವದಲ್ಲಿ ರಾಜ್ಯದಲ್ಲಿ ಚುನಾವಣೆಗೆ ಹೋಗುವುದು ಕಷ್ಟ ಎನ್ನುವುದನ್ನು ಅರ್ಥಮಾಡಿಕೊಂಡಿರುವ ಬಿಜೆಪಿ, ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಇದಕ್ಕೆ ಬಿಜೆಪಿ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು