ಸೋಮವಾರ, ಮಾರ್ಚ್ 20, 2023
30 °C
ಶಿವಸೇನೆ ಸಂಸದ ಸಂಜಯ್ ರಾವುತ್‌

ಜನರ ಬಗ್ಗೆ ಕಾಳಜಿ ಇದ್ದರೆ ಅಧಿವೇಶನದಲ್ಲಿ ಬಿಜೆಪಿ ಸಹಕರಿಸಲಿ -ಸಂಜಯ್ ರಾವುತ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ರಾಜ್ಯದ ಜನರ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಕಾಳಜಿ ಇದ್ದರೆ, ಸೋಮವಾರದಿಂದ ಆರಂಭವಾಗಲಿರುವ ಎರಡು ದಿನಗಳ ವಿಧಾನಸಭೆಯ ಮುಂಗಾರು ಅಧಿವೇಶನ ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್‌ ಹೇಳಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಂಕ್ರಾಮಿಕ ರೋಗದ ಹೆಸರಲ್ಲಿ ಸರ್ಕಾರವನ್ನು ಮೂಲೆಗುಂಪು ಮಾಡುವುದು ಸರಿಯಲ್ಲ. ಇಂಥ ತಂತ್ರಗಳನ್ನು ಬೇರೆ ಕಡೆ ಬಳಸಿಕೊಳ್ಳಿ. ಇಂಥ ತಂತ್ರಗಳು, ಪ್ರಸ್ತುತ ಎದುರಿಸುತ್ತಿರುವ ಕೋವಿಡ್‌ ಲಸಿಕೆಯ ಕೊರತೆಯನ್ನಾಗಲಿ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಸಂಕಷ್ಟವನ್ನು ಪರಿಹರಿಸುವುದಿಲ್ಲ‘ ಎಂದು ಹೇಳಿದ್ದಾರೆ.

‘ಪ್ರಸ್ತುತ ರಾಜ್ಯದ ಜನರು ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಸರ್ಕಾರ ಸದನದಲ್ಲಿ ಚರ್ಚಿಸಬೇಕಿದೆ. ನಿಜವಾಗಲೂ ಬಿಜೆಪಿಯವರು ರಾಜ್ಯದ ಜನರ ಕ್ಷೇಮವನ್ನು ಬಯಸುವುದಾದರೆ, ಈ ಎರಡು ದಿನಗಳ ಮುಂಗಾರು ಅಧಿವೇಶನ ನಡೆಯಲು ಅವಕಾಶ ಮಾಡಿಕೊಡಬೇಕು‘ ಎಂದು ಒತ್ತಾಯಿಸಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು