ಶನಿವಾರ, ಡಿಸೆಂಬರ್ 3, 2022
20 °C

ಸುಕೇಶ್ ಅವರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು: ಕೇಜ್ರಿವಾಲ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ ಅವರು ಬಿಜೆಪಿ ಧಾಟಿಯಲ್ಲೇ ಮಾತನಾಡುತ್ತಿದ್ದು, ಅವರನ್ನು ಕೇಸರಿ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವ್ಯಂಗ್ಯ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಅವರನ್ನು ಬಿಜೆಪಿ ತನ್ನ ಪಕ್ಷದ ಸ್ಟಾರ್ ಕ್ಯಾಂಪೇನರ್‌ ಆಗಿಸಿಕೊಂಡಿದೆ ಎಂದು ಹೇಳಿದ್ದಾರೆ.

‘ಬಿಜೆಪಿ ನನಗೆ ಸುಳ್ಳು ಪತ್ತೆ ಪರೀಕ್ಷೆ ಮಾಡಿಸಬೇಕೆಂದು ಒತ್ತಾಯಿಸಿತ್ತು. ಸುಕೇಶ್ ಚಂದ್ರಶೇಖರ್ ಸಹ ಅದೇ ಬೇಡಿಕೆ ಇಟ್ಟಿದ್ದಾರೆ. ಬಿಜೆಪಿ ಮತ್ತು ಸುಕೇಶ್ ಒಂದೇ ಧಾಟಿಯಲ್ಲಿ ಮಾತನಾಡುತ್ತಿದ್ದು, ಸುಕೇಶ್ ಅವರನ್ನು ಬಿಜೆಪಿ ಸೇರ್ಪಡೆಗೆ ಸಂಪೂರ್ಣ ತರಬೇತಿ ನೀಡಲಾಗಿದೆ’ಎಂದು ಕುಟುಕಿದ್ದಾರೆ.

‘ಮೋದಿಜೀ ಅವರ ರೋಡ್ ಶೋಗಳಲ್ಲಿ ಜನ ಸೇರುತ್ತಿಲ್ಲ ಎಂಬ ಬಗ್ಗೆ ಕೇಳಿದ್ದೇನೆ. ಸುಕೇಶ್ ಚಂದ್ರಶೇಖರ್ ಅವರನ್ನು ಅಲ್ಲಿಗೆ ಕರೆದೊಯ್ದರೆ, ತಮ್ಮ ವಂಚನೆ ಕುರಿತಾದ ಬಗೆ ಬಗೆಯ ಕಥೆಗಳನ್ನು ಹೇಳಿ ಜನ ಸೇರುವಂತೆ ಮಾಡುತ್ತಾರೆ. ಅವರನ್ನೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಗಾದಿಗೆ ನೇಮಕ ಮಾಡಬೇಕು’ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದ್ಧಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು