ಗುರುವಾರ , ಮಾರ್ಚ್ 30, 2023
21 °C

ಕಾಂಗ್ರೆಸ್ ಅತಿದೊಡ್ಡ ಜೇಬುಗಳ್ಳ: ರಾಹುಲ್ ಗಾಂಧಿ ಟ್ವೀಟ್‌ಗೆ ಬಿಜೆಪಿ ತಿರುಗೇಟು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಪಕ್ಷವು ದೇಶದ ಅತಿದೊಡ್ಡ ಜೇಬುಗಳ್ಳ ಎಂದು ಬಿಜೆಪಿ ತಿರುಗೇಟು ನೀಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಲ ದಿನಗಳ ಹಿಂದೆ ಮಾಡಿದ್ದ ಟ್ವೀಟ್‌ಗೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಓದಿ: 

ಇಂಧನ ದರ ಏರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಜೇಬುಗಳ್ಳರ ಬಗ್ಗೆ ಎಚ್ಚರವಿರಿ ಎಂದು ಉಲ್ಲೇಖಿಸಿದ್ದರು. ಜತೆಗೆ #TaxExtortion (ತೆರಿಗೆ ಸುಲಿಗೆ) ಹ್ಯಾಷ್‌ಟ್ಯಾಗ್‌ ಅನ್ನೂ ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ನೀಡಿರುವ ಹೇಳಿಕೆಯನ್ನು ಪಕ್ಷದ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಪ್ರಕಟಿಸಲಾಗಿದೆ. ‘ನವೆಂಬರ್ 1ರಂದು ರಾಹುಲ್ ಗಾಂಧಿಯವರು ಜೇಬುಗಳ್ಳರ ಬಗ್ಗೆ ಎಚ್ಚರಿಕೆ ಎಂದು ಟ್ವೀಟ್ ಮಾಡಿದ್ದರು. ರಾಹುಲ್ ಗಾಂಧಿ ಅವರೇ, ದೇಶದಲ್ಲಿ ಕಾಂಗ್ರೆಸ್‌ಗಿಂತ ದೊಡ್ಡ ಜೇಬುಗಳ್ಳರಿಲ್ಲ. ಕಾಂಗ್ರೆಸ್ ಪಕ್ಷವೇ ಜೇಬುಗಳ್ಳ ಪಕ್ಷವಾಗಿದೆ’ ಎಂದು ಬಿಜೆಪಿ ಟ್ವೀಟ್ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು