ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

70 ವರ್ಷಗಳಲ್ಲಿ ಕಾಂಗ್ರೆಸ್‌ ಕಟ್ಟಿದ ಎಲ್ಲವನ್ನೂ ಬಿಜೆಪಿ ಮಾರಾಟ ಮಾಡಿದೆ: ರಾಹುಲ್

Last Updated 12 ಸೆಪ್ಟೆಂಬರ್ 2021, 1:30 IST
ಅಕ್ಷರ ಗಾತ್ರ

ನವದೆಹಲಿ: ‘ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳು ಸ್ಥಾಪಿಸಿದ ಎಲ್ಲವನ್ನೂ ಬಿಜೆಪಿಯವರು ಕೇವಲ 7 ವರ್ಷಗಳಲ್ಲಿ ಮಾರಾಟ ಮಾಡಿದ್ದಾರೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ನ್ಯಾಷನಲ್‌ ಸ್ಟೂಡೆಂಟ್ಸ್ ಯೂನಿಯನ್‌ ಆಫ್‌ ಇಂಡಿಯಾದ (ಎನ್‌ಎಸ್‌ಯುಐ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ‘ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆದ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ದುರ್ಬಲ ಪ್ರಧಾನಿ ಎಂದು ಕರೆಯಲಾಗುತ್ತಿತ್ತು. ಆದರೆ, ಪುಲ್ವಾಮ ದಾಳಿಯ ಸಂದರ್ಭದಲ್ಲಿ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯನ್ನು ಪ್ರಶ್ನಿಸಲಿಲ್ಲ ಏಕೆ’ ಎಂದು ಪ್ರಶ್ನಿಸಿದ್ದಾರೆ.

‘ಕಾಂಗ್ರೆಸ್ ಪಕ್ಷ ಯಾವಾಗಲೂ ದೇಶ ಕಟ್ಟುವಿಕೆಯತ್ತ ಗಮನ ಹರಿಸುತ್ತದೆ. ಆದರೆ, ನಮ್ಮ ಪಕ್ಷದ 70 ವರ್ಷಗಳ ಶ್ರಮವನ್ನು ಬಿಜೆಪಿಯವರು ಕೇವಲ ಏಳು ವರ್ಷಗಳಲ್ಲಿ ಮಾರಾಟ ಮಾಡಿದ್ದಾರೆ’ ಎಂದು ರಾಹುಲ್‌ ಕಿಡಿಕಾರಿದ್ದಾರೆ.

ಇದೇ ವೇಳೆ ಕೊರೊನಾ ಸಂಕಷ್ಟದ ಸಮಯದಲ್ಲಿ ಶ್ರಮಿಸಿದ್ದ ಎನ್‌ಎಸ್‌ಯುಐ ಸದಸ್ಯರ ಕಾರ್ಯವೈಖರಿ ಬಗ್ಗೆ ರಾಹುಲ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕಾರಿಣಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸಂಸದ ದೀಪೇಂದರ್ ಸಿಂಗ್ ಹೂಡಾ, ‘ಪ್ರಸ್ತುತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಬಿಜೆಪಿ ಸರ್ಕಾರ ರೈತರ ಮಾತನ್ನು ಕೇಳುತ್ತಿಲ್ಲ ಹಾಗೂ ಪ್ರತಿಪಕ್ಷಗಳ ಧ್ವನಿ ಅಡಗಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT