ಬುಧವಾರ, ಮೇ 18, 2022
23 °C

ಉತ್ತರ ಪ್ರದೇಶ ಚುನಾವಣೆಗೆ ಜಾತಿಯ ಬಣ್ಣ ನೀಡುತ್ತಿರುವ ಬಿಜೆಪಿ, ಎಸ್‌ಪಿ: ಮಾಯಾವತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳು ಜಾತಿಯ ಬಣ್ಣ ನೀಡುತ್ತಿವೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಟ್ವೀಟ್‌ ಮಾಡಿರುವ ಅವರು, ‘ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಧರ್ಮ ಮತ್ತು ಜಾತಿ ರಾಜಕಾರಣದ ಪ್ರಾಬಲ್ಯ ಹೆಚ್ಚುತ್ತಿದೆ. ಮಾಧ್ಯಮಗಳಲ್ಲಿ ಈ ಕುರಿತ ಸುದ್ದಿಗಳೇ ಹೆಚ್ಚು ಪ್ರಸಾರವಾಗುತ್ತಿವೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಕೋಮು ಮತ್ತು ಜಾತಿಗಳ ನಡುವೆ ದ್ವೇಷವನ್ನು ಉಂಟು ಮಾಡಲು ಎಸ್‌ಪಿ ಹಾಗೂ ಬಿಜೆಪಿಗಳು ಯತ್ನಿಸುತ್ತಿವೆ. ಈ ಕುರಿತು ಜನರು ಜಾಗರೂಕರಾಗಿರಬೇಕು’ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭೆಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು