ಬುಧವಾರ, ಜನವರಿ 19, 2022
18 °C

ಐಟಿಡಿಸಿಗೆ ಸಂಬಿತ್‌ ಪಾತ್ರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಐಟಿಡಿಸಿ) ಅರೆಕಾಲಿಕ ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಅಧ್ಯಕ್ಷರನ್ನಾಗಿ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ ಅವರನ್ನು ನೇಮಕ ಮಾಡಲಾಗಿದೆ. 

ಪ್ರವಾಸೋದ್ಯಮ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಅನುಗುಣವಾಗಿ ಐಟಿಡಿಸಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು (ಸಿಎಂಡಿ) ವಿಭಜಿಸಲಾಗಿದೆ. ಈ ಪ‍್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಈ ಸಮಿತಿಯ ಏಕಮಾತ್ರ ಸದಸ್ಯರಾಗಿದ್ದಾರೆ.

ಹಾಲಿ ಸಿಎಂಡಿ ಗಂಜಿ ಕಮಲ್‌ ಅವರು ವ್ಯವಸ್ಥಾ‍ಪಕ ನಿರ್ದೇಶಕರ ಹುದ್ದೆಯನ್ನು ನಿರ್ವಹಿಸಲಿದ್ದು, ಸಂಬಿತ್‌ ಪಾತ್ರ ಅವರು ಮೂರು ವರ್ಷಗಳ ಅವಧಿಯವರೆಗೆ ಅರೆಕಾಲಿಕ ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಅಧ್ಯಕ್ಷರಾಗಿರುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು