ವಿವಾದಾತ್ಮಕ ಸುಗ್ರೀವಾಜ್ಞೆ: ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ

ಕೊಚ್ಚಿ: ಸಿಪಿಎಂ ನೇತೃತ್ವದ ಎಲ್‌ಡಿಎಫ್ ಸರ್ಕಾರವು ಪೊಲೀಸ್ ಕಾಯ್ದೆಗೆ ತಂದಿರುವ ತಿದ್ದುಪಡಿಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ, ಬಿಜೆಪಿ ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಹಾಗೂ ಆರ್‌ಎಸ್‌ಪಿ ನಾಯಕ ಶಿಬು ಬೇಬಿ ಜಾನ್ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
‘2011 ಕೇರಳ ಪೊಲೀಸ್ ಕಾಯ್ದೆಯಲ್ಲಿ ಸೇರ್ಪಡಿಸಿರುವ ನೂತನ ಸೆಕ್ಷನ್ 118–ಎ ಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಈ ತಿದ್ದುಪಡಿಯನ್ನು ರದ್ದುಗೊಳಿಸಲು ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಸುರೇಂದ್ರನ್ ಮನವಿ ಸಲ್ಲಿಸಿದ್ದಾರೆ.
‘ತಿದ್ದುಪಡಿಯು ಸಂವಿಧಾನದಲ್ಲಿ ನೀಡಿರುವ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ. ತಿದ್ದುಪಡಿ ಅನ್ವಯ ಸಕಾರಾತ್ಮಕ ಸಲಹೆ ಹಾಗೂ ಟೀಕೆಯೂ ಅಪರಾಧಕ್ಕೆ ಸಮಾನವೆಂಬಂತೆ ಗುರುತಿಸಲಾಗಿದೆ. ಇದು ಜನರಲ್ಲಿ ಭೀತಿಯನ್ನು ಉಂಟು ಮಾಡಿದ್ದು, ಸಲಹೆಯನ್ನು ನೀಡಲೂ ಅವರು ಹಿಂಜರಿಯುವಂತೆ ಮಾಡಿದೆ’ ಎಂದು ಸುರೇಂದ್ರನ್ ಆರೋಪಿಸಿದ್ದಾರೆ.
ಶಿಬು ಬೇಬಿ ಜಾನ್ ಅವರೂ, ತಿದ್ದುಪಡಿಯನ್ನೂ ಅಸಾಂವಿಧಾನಿಕ ಎಂದು ಘೋಷಿಸಲು ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.