ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ರೈತರ ಆತ್ಮಹತ್ಯೆ: ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Last Updated 1 ಮೇ 2022, 15:33 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನಲ್ಲಿವಿದ್ಯುತ್‌ ಕಡಿತ ಹಾಗೂ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಜೆಪಿಯ ಕಿಸಾನ್‌ ಮೋರ್ಚಾ ಮುಖ್ಯಸ್ಥ ರಾಜ್‌ಕುಮಾರ್‌ ಚಹರ್‌ ಅವರು,ಆರ್ಥಿಕ ಸಂಕಷ್ಟದಿಂದಾಗಿರಾಜ್ಯದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕೆಲವು ರೈತರ ಕುಟುಂಬದವರನ್ನು ಬಠಿಂಡಾದಲ್ಲಿ ಭೇಟಿ ಮಾಡಿದರು. ಈ ವೇಳೆ ವೈಯಕ್ತಿವಾಗಿ ತಕ್ಷಣವೇ ₹ 50,000 ಪರಿಹಾರ ನೀಡುವುದಾಗಿ ಘೋಷಿಸಿದ ಅವರು, ಮೃತರ ಕುಟುಂಬದವರಿಗೆ ಸರ್ಕಾರ ಕೂಡಲೇ ₹ 10 ಲಕ್ಷ ಪರಿಹಾರ ನೀಡಬೇಕು ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಎಎಪಿ ಸರ್ಕಾರ ಅಧಿಕಾರಕ್ಕೇರಿದರೆ, ಯಾವೊಬ್ಬ ರೈತರೂ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌ ಹೇಳಿದ್ದರು. ಆದರೆ, ಭಗವಂತ್‌ ಮಾನ್‌ ಅಧಿಕಾರ ಸ್ವೀಕರಿಸಿದಾಗಿನಿಂದ 20 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಲೋಕಸಭೆ ಸಂಸದರೂ ಆಗಿರುವ ಚಹರ್‌,'ಎಎಪಿ ಸರ್ಕಾರವು ರೈತಪರವಾಗಿರುವುದಾಗಿ ಹೇಳಿಕೊಳ್ಳುತ್ತದೆ. ಆದರೆ, ಆ ಪಕ್ಷದ ಶಾಸಕರಾದರೂ ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಲಿಲ್ಲ. ಯಾವುದೇ ಪರಿಹಾರವನ್ನೂ ನೀಡಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದ ರೈತರ ಮೇಲೆ ಬಲಪ್ರಯೋಗಿಸಲಾಗಿದೆ ಎಂದು ಪಂಜಾಬ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದಾಗ ಕೇಂದ್ರ ಸರ್ಕಾರ ಎಂದಿಗೂ ಬಲಪ್ರಯೋಗ ಮಾಡಲಿಲ್ಲ.ಎಎಪಿ ಸರ್ಕಾರ ರೈತರಿಗೆ ಸಮನ್ಸ್‌ ಕಳುಹಿಸಿದೆ. ಕೇಜ್ರಿವಾಲ್‌ ಅವರಿಗೆ ನಾಚಿಕೆಯಾಗಬೇಕು ಎಂದು ಗುಡುಗಿದ್ದಾರೆ.

ರೈತರಿಗೆ ಅಗತ್ಯವಿರುವ ಸಮಯದಲ್ಲಿ ರಾಜ್ಯದ ಹಲವು ಭಾಗಗಳಲ್ಲಿ 12–14 ಗಂಟೆ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ ಎಂದೂ ಹರಿಹಾಯ್ದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT