ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯದ ಎಲ್ಲಾ 60, ನಾಗಾಲ್ಯಾಂಡ್‌ನ 20 ಸ್ಥಾನಗಳಿಗೆ ಬಿಜೆಪಿ ಸ್ಪರ್ಧೆ

Last Updated 2 ಫೆಬ್ರುವರಿ 2023, 10:53 IST
ಅಕ್ಷರ ಗಾತ್ರ

ನವದೆಹಲಿ: ಮೇಘಾಲಯ ಮತ್ತು ನಾಗಾಲ್ಯಾಂಡ್‌ ರಾಜ್ಯಗಳ ವಿಧಾನಸಭೆ ಚುನಾವಣೆಯು ಫೆಬ್ರುವರಿ 27ರಂದು ನಡೆಯಲಿದ್ದು, ಬಿಜೆಪಿಯು ಮೇಘಾಲಯ ವಿಧಾನಸಭೆಯ ಎಲ್ಲಾ 60 ಸ್ಥಾನಗಳಿಗೆ ಮತ್ತು ನಾಗಾಲ್ಯಾಂಡ್‌ನ 20 ಸ್ಥಾನಗಳಿಗೆ ಸ್ಪರ್ಧೆ ನಡೆಸಲಿದೆ ಎಂದು ಬಿಜೆಪಿ ಕಾರ್ಯದರ್ಶಿ, ಈಶಾನ್ಯ ರಾಜ್ಯಗಳ ಬಿಜೆಪಿ ಸಹ ಉಸ್ತುವಾರಿ ರಿತುರಾಜ್‌ ಸಿನ್ಹಾ ತಿಳಿಸಿದರು.

ಮೇಘಾಲಯದಲ್ಲಿ ‘ಎಂ– ಪವರ್‌’ (ಮೋದಿ ಪವರ್‌) ಎಂಬ ಘೋಷಣೆ ಜೊತೆ ಬಿಜೆಪಿ ಸ್ಪರ್ಧಿಸಲಿದೆ. ಈ ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಶ್ವಾಸವಿದೆ. ಮೋದಿ ಅವರು ಮಾತ್ರ ತ್ವರಿತಗತಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಾರೆ ಎಂಬ ನಂಬಿಕೆ ಜನರಿಗೆ ಇದೆ ಎಂದು ಸಿನ್ಹಾ ಹೇಳಿದರು.

ನಾಗಾಲ್ಯಾಂಡ್‌ ಆಡಳಿತಾರೂಢ ನ್ಯಾಷನಲಿಸ್ಟ್‌ ಡೆಮಾಕ್ರೆಟಿಕ್‌ ಪ್ರೊಗ್ರೆಸಿವ್‌ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿಯು ಇಲ್ಲಿ ಸ್ಪರ್ಧಿಸಲಿದೆ. ನಾಗಾಲ್ಯಾಂಡ್‌ನಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದರು.

2018ರ ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ 47 ಸ್ಥಾನಗಳಿಗೆ ಸ್ಪರ್ಧಿಸಿದ್ದ ಬಿಜೆಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿತ್ತು. ಕಾರ್ನಾಡ್‌ ಸಂಗ್ಮಾ ನೇತೃತ್ವದ ನ್ಯಾಷನಲ್‌ ಪೀಪಲ್ಸ್‌ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರದ ಭಾಗವಾಗಿದೆ.

ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್‌ 2ರಂದು ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT