ಮಂಗಳವಾರ, ಸೆಪ್ಟೆಂಬರ್ 22, 2020
25 °C

ಉತ್ತರ ಪ್ರದೇಶ: ರಾಜ್ಯಸಭೆ ಉಪಚುನಾವಣೆಗೆ ಜೈ ಪ್ರಕಾಶ್ ನಿಶಾದ್ ಬಿಜೆಪಿ ಅಭ್ಯರ್ಥಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಉತ್ತರಪ್ರದೇಶದಲ್ಲಿ ಖಾಲಿ ಇರುವ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿ ಜೈ ಪ್ರಕಾಶ್‌ ನಿಶಾದ್‌ ಅವರನ್ನು ಕಣಕ್ಕಿಳಿಸಲು ಬಿಜೆಪಿ ಸಜ್ಜಾಗಿದೆ. ಪಕ‌್ಷದ ಕೇಂದ್ರ ಚುನಾವಣಾ ಸಮಿತಿಯು ನಿಶಾದ್ ಅವರ ಹೆಸರನ್ನು ಮಂಗಳವಾರ ಅಂತಿಮಗೊಳಿಸಿದೆ.

ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಪ್ರಕಟಣೆಯ ಮೂಲಕ ಹಂಚಿಕೊಂಡಿದ್ದಾರೆ.

ರಾಜ್ಯಸಭಾ ಸದಸ್ಯ ಬೇನಿ ಪ್ರಸಾದ್ ವರ್ಮಾ ಅವರ ನಿಧನದಿಂದಾಗಿ ಖಾಲಿಯಾಗಿರುವ ರಾಜ್ಯಸಭಾ ಸ್ಥಾನಕ್ಕೆ ಇದೇ ತಿಂಗಳ (ಆಗಸ್ಟ್‌) 24 ರಂದು ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು