ಶನಿವಾರ, ಮೇ 28, 2022
22 °C

ಜೈಪುರದಲ್ಲಿ ಮೇ 20–21ರಂದು ಬಿಜೆಪಿ ನಾಯಕರ ಸಭೆ: ಜೆ.ಪಿ. ನಡ್ಡಾ ಅಧ್ಯಕ್ಷತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಮುಂಬರುವ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸಲು ಹಾಗೂ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಬಿಜೆಪಿಯು ಮೇ 20 ಮತ್ತು 21ರಂದು ಜೈ‍ಪುರದಲ್ಲಿ ದೇಶದ ಎಲ್ಲ ರಾಜ್ಯಗಳ ಸಂಘಟನಾ ನಾಯಕರ ಅಧಿವೇಶನ ನಡೆಸಲಿದೆ.

ಅಧಿವೇಶನದ ಅಧ್ಯಕ್ಷತೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ವಹಿಸಿಕೊಳ್ಳಲಿದ್ದಾರೆ. ಪಕ್ಷದ ರಾಜ್ಯ ಘಟಕಗಳ ಅಧ್ಯಕ್ಷರು, ಉಸ್ತುವಾರಿಗಳು ಮತ್ತು ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನದ ಅಧಿವೇಶನದ ಪೈಕಿ, ಒಂದು ದಿನ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಲಿದ್ದಾರೆ.

ಎಲ್ಲ ರಾಜ್ಯಗಳ ಬಿಜೆಪಿ ನಾಯಕರ ಸಭೆಯು ಮೇ 20 ರಂದು ನಡೆಯಲಿದೆ. ಮರುದಿನ ಎಲ್ಲ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿಗಳು ಪ್ರತ್ಯೇಕವಾಗಿ ಸಭೆ ನಡೆಸಲಿದ್ದಾರೆ.  ರಾಜ್ಯಗಳಲ್ಲಿ ಪಕ್ಷವು ಕೈಗೊಂಡಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ವರದಿ ತರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂ‌ಗ್‌ ಅವರು ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಪ್ರಧಾನ ಸಂಘಟನಾ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಓದಿ... ವಿದ್ಯಾರ್ಥಿಗಳ ಸೇವಾ ಕೇಂದ್ರ ಸ್ಥಾಪನೆಗೆ ಯುಜಿಸಿ ಸಲಹೆ: ಹೊಸ ಮಾರ್ಗಸೂಚಿ ಇಲ್ಲಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು