ಗುರುವಾರ , ಡಿಸೆಂಬರ್ 3, 2020
23 °C

ಕರ್ನಾಟಕ ಸೇರಿ ದೇಶದ ವಿವಿಧೆಡೆಯ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕದ ಎರಡು ಕ್ಷೇತ್ರಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಕರ್ನಾಟಕದ ಸಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ ರಾಜ್ಯಗಳ ವಿವಿಧ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 

ಮಣಿಪುರದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 

ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ

ವಿವಿಧ ರಾಜ್ಯಗಳ ವಿಧಾನಸಭೆಗೆ ಈಚೆಗೆ ನಡೆದ ಉಪಚುನಾವಣೆಯಲ್ಲಿನ ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ ಪಕ್ಷಗಳ ವಿವರ ಕೆಳಕಂಡಂತಿದೆ.

* ಉತ್ತರ ಪ್ರದೇಶ: 5 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿ ತಲಾ 1 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದಾರೆ.

*ಮಧ್ಯಪ್ರದೇಶ: ಬಿಜೆಪಿ 17 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್‌ 5 ಸ್ಥಾನಗಳಲ್ಲಿ, ಬಿಎಸ್‌ಪಿ 1 ಸ್ಥಾನದಲ್ಲಿ ಮುಂದಿದೆ.

*ಗುಜರಾತ್‌: ಬಿಜೆಪಿ 7 ಸ್ಥಾನಗಳಲ್ಲಿ, ಕಾಂಗ್ರೆಸ್‌ 1 ಸ್ಥಾನದಲ್ಲಿ ಮುಂದಿದೆ.

* ಒಡಿಶಾ: ಎರಡೂ ಕ್ಷೇತ್ರಗಳಲ್ಲಿ ಬಿಜೆಡಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ

* ತೆಲಂಗಾಣ: ದುಬ್ಬಾಕ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ

* ಛತ್ತೀಸ್‌ಗಡ: ಮಾರ್ವಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಮುನ್ನಡೆ

* ಮಣಿಪುರ: ಬಿಜೆಪಿ 2 ಸ್ಥಾನಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್‌ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ಸ್ಥಾನದಲ್ಲಿ ಮುಂದಿದ್ದಾರೆ.

* ನಾಗಾಲ್ಯಾಂಡ್‌: ಎರಡೂ ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಮಧ್ಯಪ್ರದೇಶದಲ್ಲಿ 28, ಗುಜರಾತ್‌ನಲ್ಲಿ ಎಂಟು, ಉತ್ತರಪ್ರದೇಶದಲ್ಲಿ ಏಳು, ಜಾರ್ಖಂಡ್, ಕರ್ನಾಟಕ, ನಾಗಾಲ್ಯಾಂಡ್ ಮತ್ತು ಒಡಿಶಾದಲ್ಲಿ ತಲಾ ಎರಡು ಸ್ಥಾನಗಳಲ್ಲಿ  ಮತ್ತು ತೆಲಂಗಾಣ, ಛತ್ತೀಸ್‌ಗಡ, ಹರಿಯಾಣದಲ್ಲಿ ತಲಾ ಒಂದು ಸ್ಥಾನಕ್ಕೆ ಸೇರಿದಂತೆ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು