ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ: ಅಮಿತ್ ಶಾ

Last Updated 5 ಜೂನ್ 2022, 3:02 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರವನ್ನು ನಿರ್ವಹಿಸಲಿದ್ದು, 2024ರ ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮಹತ್ತರ ಪಾತ್ರ ನಿರ್ವಹಿಸಲಿದೆ. ಈ ನಿಟ್ಟಿನಲ್ಲಿ ನಮ್ಮೊಂದಿಗೆ ಕೈಜೋಡಿಸಲು ಬಯಸುವವರನ್ನು ಸ್ವಾಗತಿಸುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಸ್ವಂತ ಬಲದಿಂದ ಚುನಾವಣೆ ಎದುರಿಸಲಿದೆ. ಅಲ್ಲದೆ ಗೆಲುವು ಸಾಧಿಸಿ ರಾಜ್ಯಕ್ಕೆ ಏಳಿಗೆಯನ್ನು ತರಲಿದ್ದೇವೆ ಎಂದು ಹೇಳಿದರು.

ಧರ್ಮ ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ಪಂಜಾಬಿನ ಜನರ ತ್ಯಾಗ, ಬಲಿದಾನವನ್ನು ಅಮಿತ್ ಶಾ ಸ್ಮರಿಸಿದರು.

ಕೇಂದ್ರ ಹಾಗೂ ಇಡೀ ದೇಶವು ಪಂಜಾಬ್ ಜನರೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ಈ ಬಿಕ್ಕಟ್ಟಿನ ಪರಿಸ್ಥಿತಿ ಇನ್ನಷ್ಟು ಹದಗೆಡಿಸಲು ಬಿಡುವುದಿಲ್ಲ ಎಂದು ನಾನು ಪಂಜಾಬ್ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಹರಿಹಾಯ್ದಿರುವ ಶಾ, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದೆಗೆಟ್ಟಿದ್ದು, ಮೂರೇ ತಿಂಗಳಲ್ಲಿ ಕಪಟ ಮುಖ ಬಹಿರಂಗವಾಗಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT