ಹೈದರಾಬಾದ್: ಆಡಳಿತಾರೂಢ ಟಿಆರ್‌ಎಸ್ ಸರ್ಕಾರವನ್ನು ಉರುಳಿಸುವ ಸಲುವಾಗಿ ಬಿಜೆಪಿಯು ಟಿಆರ್‌ಎಸ್‌ನ ಸುಮಾರು 20ರಿಂದ 30 ಶಾಸಕರನ್ನು ಖರೀದಿಸಲು ಯತ್ನಿಸುತ್ತಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಆರೋಪಿಸಿದ್ದಾರೆ.
ಇಲ್ಲಿನ ಮನುಗುಡೆ ರಾವ್ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯ ನಿಮಿತ್ತ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೆಹಲಿಯಿಂದ ಬಂದ ‘ದಲ್ಲಾಳಿಗಳು’ ಟಿಆರ್‌ಎಸ್‌ನ ಪ್ರತಿ ಶಾಸಕನಿಗೂ ₹ 100 ಕೋಟಿ ಹಣದ ಆಮಿಷ ಒಡ್ಡಿದ್ದಾರೆ. ಆದರೆ, ನಿಜವಾದ ಮಣ್ಣಿನ ಮಕ್ಕಳಾಗಿರುವ ಟಿಆರ್‌ಎಸ್ ಶಾಸಕರು ಇದನ್ನು ತಿರಸ್ಕರಿಸಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.