ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರ್‌ಭೂಮ್‌ ಸಜೀವ ದಹನ ಪ್ರಕರಣ: ಸಿಬಿಐ ಮೇಲೆ ಪ್ರಭಾವ ಬೀರಲು ಬಿಜೆಪಿ ಯತ್ನ-ಟಿಎಂಸಿ

Last Updated 27 ಮಾರ್ಚ್ 2022, 13:41 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಮೇಲೆ ಬಿಜೆಪಿ ಪ್ರಭಾವ ಬೀರಲು ಯತ್ನಿಸುತ್ತಿದೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 8 ಜನರ ಸಜೀವ ದಹನ ಪ್ರಕರಣ ಸಂಭವಿಸಿದ ಬಳಿಕ ರಾಜ್ಯದಲ್ಲಿ ಟಿಎಂಸಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಬಿಜೆಪಿ ದೂರಿದೆ.

ವರ್ಷಗಳ ಹಿಂದೆ ಗುಜರಾತಿನಲ್ಲಿ ನಡೆದ ಹತ್ಯೆ ಪ್ರಕರಣಗಳನ್ನು ಬಿಜೆಪಿ ಮರೆತಿದೆ. ಈಗಾಗಲೇ ಸೂಕ್ತ ಕ್ರಮ ಕೈಗೊಂಡಿದ್ದರೂ ಕೂಡ, ಬೋಗ್‌ತುಇ ಗ್ರಾಮದಲ್ಲಿನ ಘಟನೆ ವಿಚಾರವಾಗಿ ಮೊಸಳೆ ಕಣ್ಣೀರು ಸುರಿಸುತ್ತಿದೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಸರ್ಕಾರ ಬದ್ಧವಾಗಿದೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇವೆ ಎಂದು ಹೇಳಿದ್ದಾರೆ.

ಘಟನೆ ನಡೆದ ಎರಡು ದಿನಗಳ ಒಳಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಮತ್ತು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ನ್ಯಾಯೋಚಿತ, ನಿಷ್ಪಕ್ಷಪಾತ ಮತ್ತು ತ್ವರಿತ ಸಿಬಿಐ ತನಿಖೆಯನ್ನು ನಾವು ಒಪ್ಪಿಕೊಳ್ಳುತ್ತೇವೆ. ತನ್ನ ರಾಜಕೀಯ ಹಿತಾಸಕ್ತಿಗಾಗಿ ಬಿಜೆಪಿಯು ಸಿಬಿಐ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿರುವುದು ಕಂಡುಬರುತ್ತಿದೆ. ಇಂತಹ ನಡೆಯನ್ನು ನಾವು ವಿರೋಧಿಸುತ್ತೇವೆ' ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿನ ಸಜೀವ ದಹನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಕಲ್ಕತ್ತ ಹೈಕೋರ್ಟ್‌ ಶುಕ್ರವಾರ(ಮಾ.25) ಆದೇಶ ನೀಡಿದೆ.

ಮಾರ್ಚ್‌ 22ರ ಮಂಗಳವಾರ ಬಿರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್‌ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 8 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿತ್ತು. ತನಿಖೆಯನ್ನು ಸಿಬಿಐ ಅಥವಾ ಎನ್‌ಐಎಗೆ ವರ್ಗಾಯಿಸಬೇಕು ಎಂದು ಕೋರಿ ಹಲವರು ಕಲ್ಕತ್ತ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗಳನ್ನು ವಜಾ ಮಾಡಿದ್ದ ಹೈಕೋರ್ಟ್‌, ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT