ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gujarat Polls: ಬಿಜೆಪಿಯಿಂದ ಪ್ರಚಾರಕ್ಕೆ ರೋಬೋಟ್ ಬಳಕೆ

Last Updated 18 ನವೆಂಬರ್ 2022, 11:13 IST
ಅಕ್ಷರ ಗಾತ್ರ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪ್ರಚಾರ ಕಾವೇರಿದೆ. ಆಡಳಿತಾರೂಢ ಬಿಜೆಪಿ ಸತತ ಏಳನೇ ಬಾರಿಗೆ ಅಧಿಕಾರ ಗೆಲ್ಲುವ ಗುರಿಯನ್ನಿರಿಸಿದೆ.

ಈ ಮಧ್ಯೆ ಸಾರ್ವಜನಿಕ ಪ್ರಚಾರದಲ್ಲಿ ಬಿಜೆಪಿ ರೋಬೋಟ್ ಬಳಕೆ ಮಾಡಿರುವುದು ಗಮನ ಸೆಳೆದಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಮತದಾರರ ಮನೆ ಬಾಗಿಲು ತಟ್ಟುತ್ತಿರುವ ಅಭ್ಯರ್ಥಿಗಳು, ರೋಬೋಟ್ ಮೂಲಕ ಕರಪತ್ರಗಳನ್ನು ಹಂಚುತ್ತಿದ್ದಾರೆ.

ರೋಬೋಟ್‌ನಲ್ಲಿ ಸ್ಪೀಕರ್ ಲಗ್ಗತ್ತಿಸಲಾಗಿದೆ. ಈ ಮೂಲಕ ಚುನಾವಣೆ ಘೋಷಣೆಗಳನ್ನು ಪ್ರಚಾರ ಮಾಡಲಾಗುತ್ತದೆ.

ಹರ್ಷಿತ್ ಪಟೇಲ್ ಎಂಬುವರು ರೋಬೋಟ್ ನಿರ್ಮಿಸಿದ್ದಾರೆ. ಈ ಮೂಲಕ ಬಿಜೆಪಿ ಚುನಾವಣಾ ಪ್ರಚಾರಕ್ಕೆ ನೆರವಾಗಿದ್ದಾರೆ.

182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಗೆ ಡಿಸೆಂಬರ್ 1 ಹಾಗೂ 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿ.8ರಂದು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT