ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮೋದಿ– ಯೋಗಿ ನಡುವೆ ಭಿನ್ನಾಭಿಪ್ರಾಯವಿಲ್ಲ; ಉತ್ತರ ಪ್ರದೇಶ ಸಿ.ಎಂ ಬದಲಾವಣೆ ಇಲ್ಲ’

ಮೋದಿ– ಯೋಗಿ ನಡುವೆ ಭಿನ್ನಾಭಿಪ್ರಾಯವಿಲ್ಲ
Last Updated 6 ಜೂನ್ 2021, 20:23 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ಭಾನುವಾರ ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ ಪ್ರಧಾನಿ ಮೋದಿ ಮತ್ತು ಕೆಲವು ರಾಷ್ಟ್ರೀಯ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಬಿಜೆಪಿ ಈ ಸ್ಪಷ್ಟನೆ ನೀಡಿದೆ.

ರಾಜ್ಯಪಾಲರಾದ ಆನಂದಿಬೇನ್‌ ಪಟೇಲ್‌ ಅವರನ್ನು ರಾಜಭವನದಲ್ಲಿ ಭಾನುವಾರ ಭೇಟಿಯಾದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ ಸಿಂಗ್‌ ಅವರು, ‘ರಾಷ್ಟ್ರಿಯ ನಾಯಕರು ಮತ್ತು ಮುಖ್ಯಮಂತ್ರಿ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಕೇವಲ ಕಾಲ್ಪನಿಕ ವರದಿಗಳನ್ನು ಸೃಷ್ಟಿಸಲಾಗುತ್ತಿದೆ’ ಎಂದು ಹೇಳಿದರು.

ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ’ ಎಂದರು.

2022ರ ಮಾರ್ಚ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಸಚಿವ ಸಂಪುಟ ಪುನರ್‌ರಚನೆ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶನಿವಾರ ರಾತ್ರಿ ರಾಧಾ ಮೋಹನ್‌ ಸಿಂಗ್‌ ಅವರು, ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್‌ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಸುನೀಲ್‌ ಬನ್ಸಲ್‌ ಅವರ ಜತೆ ಸಭೆ ನಡೆಸಿದ್ದು ಹಲವು ಉಹಾಪೋಹಗಳಿಗೆ ಕಾರಣವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT