ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಚಿಂತನೆ: ಸಿಸೋಡಿಯಾ

Last Updated 7 ಏಪ್ರಿಲ್ 2022, 15:33 IST
ಅಕ್ಷರ ಗಾತ್ರ

ನವದೆಹಲಿ: ‘ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯದ ಮುಖ್ಯಮಂತ್ರಿಜೈರಾಮ್‌ ಠಾಕೂರ್‌ ಅವರ ಸ್ಥಾನಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್ ಅವರನ್ನು ಬದಲಾವಣೆ ಮಾಡಲು ಬಿಜೆಪಿ ಮುಂದಾಗಿದೆ’ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಗುರುವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರ ಹೆಚ್ಚುತ್ತಿರುವ ಪ್ರಸಿದ್ಧಿಯಿಂದಾಗಿ ಚುನಾವಣೆಯಲ್ಲಿ ಸೋಲು ಅನುಭವಿಸಬಹುದು ಎಂಬ ಭೀತಿಯಿಂದ ದೊಡ್ಡ ಬದಲಾವಣೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ’ ಎಂದರು.

‘ಜೈ ರಾಮ್‌ ಠಾಕೂರ್‌ ಅವರ ಸರ್ಕಾರವೂ ಸಂಪೂರ್ಣ ವಿಫಲವಾಗಿದೆ. ಜನರು ಅವರ ಆಡಳಿತದಿಂದ ನಿರಾಶರಾಗಿದ್ದಾರೆ. ಹಾಗಾಗಿ ಅನುರಾಗ್‌ ಠಾಕೂರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಈ ಬಗ್ಗೆ ಅತ್ಯಂತ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಬಂದಿದೆ’ ಎಂಬುದಾಗಿ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT