ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಉತ್ತರಾಖಂಡದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ರಚಿಸಲಿದೆ: ಧರ್ಮೇಂದ್ರ ಪ್ರಧಾನ್

Last Updated 12 ಸೆಪ್ಟೆಂಬರ್ 2021, 10:34 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಬಿಜೆಪಿಯು ʼಡಬಲ್‌ ಎಂಜಿನ್‌ ಸರ್ಕಾರʼ ರಚಿಸಲಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ʼದೇವ ಭೂಮಿʼ (ಉತ್ತರಾಖಂಡ)ದೊಂದಿಗೆ ವಿಶೇಷ ಬಾಂಧವ್ಯವನ್ನು ಹೊಂದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ನಾವು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಡಬಲ್‌ ಎಂಜಿನ್‌ ಸರ್ಕಾರವನ್ನು ರಚಿಸಲಿದ್ದೇವೆʼ ಎಂದಿದ್ದಾರೆ.

‌ಉತ್ತರಾಖಂಡದ ಪುರೋಲಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜಕುಮಾರ್‌ ಅವರು ಇದೇ ವೇಳೆ ಬಿಜೆಪಿಗೆ ಸೇರ್ಪಡೆಯಾದರು.

ʼರಾಜ್ಯದಲ್ಲಿನ ಪಕ್ಷದ ರಾಜಕೀಯ ಚಟುವಟಿಕೆಗಳೊಂದಿಗೆ ತುಂಬಾ ಸಮಯದಿಂದ ಸಂಪರ್ಕದಲ್ಲಿದ್ದೇನೆ. ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ರಾಜಕುಮಾರ್‌ ಜೀ ಅವರು ತಮ್ಮ ಸೂಕ್ಮತೆ, ಹೋರಾಟ ಮತ್ತುನಾಯಕತ್ವದ ಗುಣಗಳಿಂದಡೆಹ್ರಾಡೂನ್‌ನಿಂದ ಹಿಡಿದು ಬೆಟ್ಟದ ಪ್ರದೇಶಗಳಲ್ಲಿರುವ ಹಳ್ಳಿಗಳವರೆಗೂ ಹೆಸರುವಾಸಿಯಾಗಿದ್ದಾರೆʼಎಂದು ಹೇಳಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ಪ್ರಧಾನಿ ಮೋದಿ ಅವರ ಕೆಲಸಗಳಿಂದ ಜನರು ಪ್ರಭಾವಿತರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇದು ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸಲಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ರಾಜಕುಮಾರ್‌, ʼಮೋದಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ದೇಶವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ರಾಜ್ಯದಲ್ಲಿ ರಸ್ತೆಅಭಿವೃದ್ಧಿ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ, ದೇಶದಲ್ಲಿ ಕೋವಿಡ್‌ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿ ಶ್ಲಾಘನೀಯ. ಬಿಜೆಪಿ ಜನರಿಗಾಗಿ ಕೆಲಸ ಮಾಡುತ್ತಿದೆʼ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಮದನ್‌ ಕೌಶಿಕ್‌ ಅವರೂ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. 70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ2022ರಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT