ಸೋಮವಾರ, ಅಕ್ಟೋಬರ್ 18, 2021
24 °C

2022ರಲ್ಲಿಯೂ ಮಣಿಪುರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಜೆ.ಪಿ.ನಡ್ಡಾ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ: 2017ರಿಂದ ಈವರೆಗಿನ ಅಭಿವೃದ್ಧಿ ಕಾರ್ಯಗಳಿಂದಾಗಿ ಮಣಿಪುರದಲ್ಲಿ ಎರಡನೇ ಬಾರಿಗೆ ಬಿಜೆಪಿ ಅಧಿಕಾರ ಸ್ವೀಕರಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಷ್ಣುಪುರದಲ್ಲಿ ಸಾರ್ವಜನಿಕ ರ್‍ಯಾಲಿಯೊಂದರಲ್ಲಿ ಮಾತನಾಡಿದ ಅವರು, ‘ಮುಷ್ಕರಗಳು, ಬಾಂಬ್ ಸ್ಫೋಟಗಳು, ಅಭದ್ರತೆಯ ವಾತಾವರಣದಲ್ಲಿದ್ದ ಮಣಿಪುರ ಈಗ ಅಭಿವೃದ್ಧಿಯ ಹಾದಿಯಲ್ಲಿದೆ. ಸರಿಯಾದ ಸಮಯದಲ್ಲಿ ಮಣಿಪುರದ ಜನ ಬಿಜೆಪಿಯನ್ನು ಆಯ್ಕೆ ಮಾಡಿದ್ದರಿಂದ ಇದು ಸಾಧ್ಯವಾಗಿದೆ. ಆತ್ಮ ನಿರ್ಭರ ಭಾರತ ಅಭಿಯಾನದಲ್ಲಿ ಈಶಾನ್ಯ ರಾಜ್ಯಗಳ ಪೈಕಿ ಮಣಿಪುರ ಮುಂಚೂಣಿಯಲ್ಲಿದೆ. ಎನ್‌.ಬೀರೇನ್ ಸಿಂಗ್ ಸರ್ಕಾರವು ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದರ ಜತೆಗೆ ಸಮುದಾಯಗಳನ್ನು ಒಗ್ಗೂಡಿಸಿದೆ. ಸ್ಥಿರತೆ ನಿರ್ಮಾಣ ಮಾಡಿದೆ’ ಎಂದು ಹೇಳಿದ್ದಾರೆ.

ಓದಿ: 

ನಡ್ಡಾ ಅವರು ಎರಡು ದಿನಗಳ ಮಣಿಪುರ ಪ್ರವಾಸದಲ್ಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆ ಬಗ್ಗೆ ಪರಿಶೀಲಿಸುವುದಕ್ಕಾಗಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು